ದಕ್ಷಿಣ ಕನ್ನಡ : ಮುಂಗಾರು ಮುನ್ನೆಚ್ಚರಿಕೆ ಕೈಗೊಳ್ಳಲು ಸೂಚನೆ
ಮಂಗಳೂರು, 22 ಮೇ (ಹಿ.ಸ.) : ಆ್ಯಂಕರ್ : ಮುಂಗಾರು ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಿಲ್ಲಾ ಯೋಜನಾ ಸಮಿತಿ ಸಭೆ ಮಂಗಳೂರಿನ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ಉಸ್ತುವಾರಿ ಸಚಿವರು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನೆ
Meeting


ಮಂಗಳೂರು, 22 ಮೇ (ಹಿ.ಸ.) :

ಆ್ಯಂಕರ್ : ಮುಂಗಾರು ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಿಲ್ಲಾ ಯೋಜನಾ ಸಮಿತಿ ಸಭೆ ಮಂಗಳೂರಿನ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು. ಉಸ್ತುವಾರಿ ಸಚಿವರು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನೆ ನಡೆಸಿ ತುರ್ತು ಸಿದ್ಧತೆಗಳನ್ನು ಬಲಪಡಿಸುವಂತೆ ಸೂಚಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಕಳೆದ ವರ್ಷ ಮಳೆಗಾಲದಲ್ಲಿ ಸಂಭವಿಸಿದ ಅನಾಹುತಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಯಾವುದೇ ರೀತಿಯ ಅಪಾಯ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕಠಿಣವಾಗಿ ಅನುಷ್ಠಾನಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಮಳೆಗಾಲದ ಸಂದರ್ಭದಲ್ಲಿ ರಸ್ತೆ ಕುಸಿತ, ನೆರೆ ಪರಿಸ್ಥಿತಿ, ಮರ ಬಿದ್ದು ಅಪಾಯ ಉಂಟಾಗುವ ಪ್ರದೇಶಗಳು ಹಾಗೂ ತಗ್ಗು ಪ್ರದೇಶಗಳನ್ನು ಗುರುತಿಸಿ ನಿರಂತರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ವಿಶೇಷವಾಗಿ ಹಿಂದಿನ ವರ್ಷ ಅವಘಡಗಳು ಸಂಭವಿಸಿದ ಪ್ರದೇಶಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಚಿವರು ತಿಳಿಸಿದರು.

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಚಿತ ಕ್ರಮಗಳನ್ನು ಕೈಗೊಳ್ಳುವ ಅಗತ್ಯವನ್ನು ಸಭೆಯಲ್ಲಿ ಒತ್ತಿಹೇಳಲಾಯಿತು. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಸರಬರಾಜು ನಿರಂತರವಾಗಿರಲು ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಲಾಯಿತು. ಜೊತೆಗೆ ಮಳೆಗಾಲದಲ್ಲಿ ಜಲಮೂಲಗಳ ಮಾಲಿನ್ಯ ತಡೆಯಲು ಆರೋಗ್ಯ ಇಲಾಖೆ ಮತ್ತು ಸ್ಥಳೀಯ ಆಡಳಿತದೊಂದಿಗೆ ಸಮನ್ವಯ ಹೆಚ್ಚಿಸುವಂತೆ ತಿಳಿಸಲಾಯಿತು.

ತುರ್ತು ಪರಿಸ್ಥಿತಿಗಳಿಗೆ ತಕ್ಷಣ ಸ್ಪಂದಿಸುವ ವ್ಯವಸ್ಥೆ, ರಕ್ಷಣಾ ತಂಡಗಳ ಸಿದ್ಧತೆ ಮತ್ತು ಪರಿಹಾರ ಕಾರ್ಯಾಚರಣೆಗಳ ಸಂಯೋಜನೆಗೆ ಹೆಚ್ಚಿನ ಗಮನ ನೀಡಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಇತರ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande