ಬಕ್ರೀದ್ ಹಬ್ಬ ಹಿನ್ನೆಲೆ ಬಲ್ಲರವಾಡದಲ್ಲಿ ಶಾಂತಿ ಸಭೆ
ಧಾರವಾಡ, 22 ಮೇ (ಹಿ.ಸ.) : ಆ್ಯಂಕರ್ : ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಬಲ್ಲರವಾಡ ಗ್ರಾಮದಲ್ಲಿ ಶುಕ್ರವಾರ ಶಾಂತಿ ಸಭೆ ನಡೆಸಲಾಯಿತು. ಸಭೆಯಲ್ಲಿ ಗ್ರಾಮದಲ್ಲಿನ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಧಾರ್ಮಿಕ ಮುಖಂಡರು, ಗಣ್ಯರು ಮತ್ತು
ಶಾಂತಿ ಸಭೆ


ಧಾರವಾಡ, 22 ಮೇ (ಹಿ.ಸ.) :

ಆ್ಯಂಕರ್ : ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಬಲ್ಲರವಾಡ ಗ್ರಾಮದಲ್ಲಿ ಶುಕ್ರವಾರ ಶಾಂತಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಗ್ರಾಮದಲ್ಲಿನ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಧಾರ್ಮಿಕ ಮುಖಂಡರು, ಗಣ್ಯರು ಮತ್ತು ಸಾರ್ವಜನಿಕರು ಭಾಗವಹಿಸಿ ಹಬ್ಬವನ್ನು ಶಾಂತಿಯುತ ಹಾಗೂ ಸೌಹಾರ್ದಯುತವಾಗಿ ಆಚರಿಸುವ ಕುರಿತು ಚರ್ಚಿಸಿದರು.

ಪೊಲೀಸ್ ಅಧಿಕಾರಿಗಳು ಮಾತನಾಡಿ, ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು. ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡದೇ, ಪರಸ್ಪರ ಸಹಕಾರ ಮತ್ತು ಸಹಿಷ್ಣುತೆಯಿಂದ ಹಬ್ಬ ಆಚರಿಸಬೇಕು ಎಂದು ಸಲಹೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande