
ಕೊಪ್ಪಳ, 22 ಮೇ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ಕೇಂದ್ರದಲ್ಲಿ ಮೇ 24 ರಂದು ತುರ್ತು ನಿರ್ವಹಣೆ ಕೆಲಸದ ನಿಮಿತ್ತ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
110ಕೆವಿ ಕೊಪ್ಪಳ ಉಪಕೇಂದ್ರದ ಪೀಡರ್ ಎಫ್ 9 ಬನ್ನಿಕಟ್ಟಿ ಫೀಡರ್ ನಾ ಬಿ.ಟಿ ಪಾಟೀಲ್ ನಗರ, ಫಿರಧೋಸ್ ನಗರ, ಅಶೋಕ ವೃತ್ತ, ಬಸ್ ನಿಲ್ದಾಣ, ಬನ್ನಿಕಟ್ಟಿ ಏರಿಯಾ,ಗದಗ ರಸ್ತೆ, ವಿಧ್ಯಾನಗರ, ಹಳೆ ಸರ್ಕಾರಿ ಆಸ್ಪತ್ರೆ ಹಾಗೂ ವಿಕಾಸ ನಗರದಲ್ಲಿ ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆುವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕಾಮಗಾರಿ ಬೇಗನೆ ಮುಕ್ತಾಯಗೊಂಡಲ್ಲಿ, ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ಯಾವುದೇ ತರಹದ ವಿದ್ಯುತ್ ದುರಸ್ಥಿ ಕೆಲಸ-ಕಾರ್ಯಗಳನ್ನು ಮಾಡಬಾರದು ಒಂದು ವೇಳೆ ವಿದ್ಯುತ್ ಅಫಘಾತ ಸಂಬವಿಸಿದ್ದಲ್ಲಿ ಕಂಪನಿಯು ಜವಬ್ದಾರರಾಗಿರುವುದಿಲ್ಲ ಎಂದು ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್