
ಕೊಪ್ಪಳ, 22 ಮೇ (ಹಿ.ಸ.) :
ಆ್ಯಂಕರ್ : ಯುವನಿಧಿ ಯೋಜನೆಯಡಿಯಲ್ಲಿ ನೋಂದಣಿಯಾದ ಫಲಾನುಭವಿಗಳು ಕಡ್ಡಾಯವಾಗಿ ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಪಡೆಯಬೇಕು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.
ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡು ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಯುವಕ ಹಾಗೂ ಯುವತಿಯರಿಗೆ ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಜಿಲ್ಲೆಯ ಜಿಟಿಟಿಸಿ, ಸಿಡಾಕ್, ಸರ್ಕಾರಿ ಐಟಿಐಗಳಲ್ಲಿ ಯುವನಿಧಿ ಪ್ಲಸ್ ಅಡಿಯಲ್ಲಿ ತರಬೇತಿಯನ್ನು ನೀಡಲಾಗುತ್ತಿದ್ದು, ಯುವನಿಧಿ ಫಲಾನುಭವಿಗಳು ಯುವನಿಧಿ ಪ್ಲಸ ಅಡಿಯಲ್ಲಿ ತರಬೇತಿ ಪಡೆಯುತ್ತಿರುವುದಿಲ್ಲ.
ಆದಕಾರಣ ಜಿಲ್ಲೆಯ ಎಲ್ಲಾ ಯುವನಿಧಿ ಫಲಾನುಭವಿಗಳು https://skillmission.karnataka.gov.in/app/registration_type ಲಿಂಕ್ನ್ನು ಉಪಯೋಗಿಸಿ ತುರ್ತಾಗಾಗಿ ನೋಂದಾಯಿಸಿಕೊಂಡು ಯುವನಿಧಿ ಪ್ಲಸ್ ಅಡಿಯಲ್ಲಿ ತರಬೇತಿ ಪಡೆದು ಈ ಸುವರ್ಣಾಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ಕೆ.ಜಿ.ಐ.ಡಿ ಕಚೇರಿ ಎದುರುಗಡೆ, ಜಿಲ್ಲಾಡಳಿತ ಭವನ ಕೊಪ್ಪಳ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು. ಪ್ರಸ್ತುತ ಯುವನಿಧಿ ಫಲಾನುಭವಿಗಳು ಯುವನಿಧಿ-ಪ್ಲಸ್ ಕಾರ್ಯಕ್ರಮದಡಿ ತರಬೇತಿ ಪಡೆದರೂ ಸರ್ಕಾರವು ನಿಗದಿಪಡಿಸಿರುವ ಅವಧಿಯವರೆಗೆ ನಿರುದ್ಯೋಗ ಭತ್ಯೆ ಪಡೆಯಲು ಯಾವುದೇ ಅಡಚಣೆಗಳು ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್