ಆಳಂದ ದರ್ಗಾ ಪ್ರಕರಣ ಹಿಂಪಡೆಯುವ ಕ್ರಮಕ್ಕೆ ಯತ್ನಾಳ ಆಕ್ರೋಶ
ವಿಜಯಪುರ, 22 ಮೇ (ಹಿ.ಸ.) : ಆ್ಯಂಕರ್ : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆಳಂದ ಲಾಡ್ಲೆ ಮಶಾಕ್ ದರ್ಗಾ ಸಂಬಂಧಿತ ಪ್ರಕರಣ ಸೇರಿದಂತೆ ಒಟ್ಟು 13 ಪ್ರಕರಣಗಳನ್ನು ಹಿಂಪಡೆಯುವ ನಿರ್ಧಾರಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹೇಳಿಕೆ ಬಿಡುಗಡೆ
ಯತ್ನಾಳ


ವಿಜಯಪುರ, 22 ಮೇ (ಹಿ.ಸ.) :

ಆ್ಯಂಕರ್ : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆಳಂದ ಲಾಡ್ಲೆ ಮಶಾಕ್ ದರ್ಗಾ ಸಂಬಂಧಿತ ಪ್ರಕರಣ ಸೇರಿದಂತೆ ಒಟ್ಟು 13 ಪ್ರಕರಣಗಳನ್ನು ಹಿಂಪಡೆಯುವ ನಿರ್ಧಾರಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸರ್ಕಾರದ ಈ ಕ್ರಮವನ್ನು “ವೋಟ್ ಬ್ಯಾಂಕ್ ರಾಜಕೀಯ” ಎಂದು ಆರೋಪಿಸಿದ್ದಾರೆ. 2022ರಲ್ಲಿ ಆಳಂದ ದರ್ಗಾ ಪ್ರದೇಶದಲ್ಲಿ ನಡೆದ ಗಲಾಟೆ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಧಕ್ಕೆಯುಂಟಾಗಿದ್ದು, ಗಂಭೀರ ಪ್ರಕರಣಗಳು ದಾಖಲಾಗಿದ್ದವು. ಇಂತಹ ಪ್ರಕರಣಗಳನ್ನು ಹಿಂಪಡೆಯುವುದು ಸರಿಯಾದ ನಡೆ ಅಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕೆಲವು ಪ್ರಕರಣಗಳಲ್ಲಿ ಸಾರ್ವಜನಿಕ ಆಸ್ತಿ ಹಾನಿ, ಹಿಂಸಾಚಾರ ಹಾಗೂ ಸರ್ಕಾರಿ ಸಿಬ್ಬಂದಿಯ ಮೇಲೆ ಹಲ್ಲೆ ಸಂಬಂಧಿತ ಆರೋಪಗಳೂ ಇದ್ದವು. ಇಂತಹ ಪ್ರಕರಣಗಳನ್ನು ಹಿಂಪಡೆಯುವುದು “ಸಂವಿಧಾನಾತ್ಮಕ ಮೌಲ್ಯಗಳಿಗೆ ವಿರುದ್ಧ” ಎಂದು ಅವರು ಟೀಕಿಸಿದ್ದಾರೆ. ಅಲ್ಲದೆ, ಸರ್ಕಾರವು ಅಭಿವೃದ್ಧಿ ಮತ್ತು ಆಡಳಿತಾತ್ಮಕ ವಿಷಯಗಳಿಗಿಂತ ರಾಜಕೀಯ ಲಾಭಕ್ಕಾಗಿ ಈ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande