
ನವದೆಹಲಿ, 23 ಮೇ (ಹಿ.ಸ.) :
ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು 11 ಗಂಟೆಗೆ ವಿಡಿಯೊ ಕಾನ್ಫರೆನ್ಸ್ ಮೂಲಕ 19ನೇ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ದೇಶದಾದ್ಯಂತ 51 ಸಾವಿರಕ್ಕೂ ಹೆಚ್ಚು ನೂತನ ನೇಮಕಾತಿ ಪಡೆದ ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿ ಅವರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ದೇಶದ 47 ಸ್ಥಳಗಳಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗುತ್ತದೆ.
ರೈಲ್ವೆ ಸಚಿವಾಲಯ, ಸಂವಹನ ಸಚಿವಾಲಯದ ಅಂಚೆ ಇಲಾಖೆ, ರಕ್ಷಣಾ ಸಚಿವಾಲಯ, ಹಣಕಾಸು ಸಚಿವಾಲಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳಿಗೆ ನೇಮಕಗೊಂಡವರಿಗೆ ನೇಮಕಾತಿ ಪತ್ರ ವಿತರಣೆ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.