ಹಿಂದೂಗಳ ಮೇಲಿನ ದೌರ್ಜನ್ಯ, ಓಲೈಕೆ ರಾಜಕಾರಣ : ವಿಜಯೇಂದ್ರ
ಬೆಂಗಳೂರು, 23 ಮೇ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಸರ್ಕಾರದ ಅಧಿಕಾರ ಬಂದಾಗಿನಿಂದ ತುಷ್ಟೀಕರಣದ ಎಲ್ಲಾ ಮಿತಿಗಳನ್ನು ದಾಟಿ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ರಾಜ್ಯದಲ್ಲಿ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು,
Byv


ಬೆಂಗಳೂರು, 23 ಮೇ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ಸರ್ಕಾರದ ಅಧಿಕಾರ ಬಂದಾಗಿನಿಂದ ತುಷ್ಟೀಕರಣದ ಎಲ್ಲಾ ಮಿತಿಗಳನ್ನು ದಾಟಿ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ಅಲ್ಪಸಂಖ್ಯಾತರನ್ನು ಓಲೈಸಲು ಯುವ ಮುಖಂಡರ ಮೇಲೆಯೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ. ಈ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ರಾಜ್ಯದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ದೂರಿದರು.

ದೇಶದ್ರೋಹಿಗಳ ವಿರುದ್ಧ ಕಾನೂನು ಸುವ್ಯವಸ್ಥೆ ಹಾಳುಗೆಡಹುವವರ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಕಾಂಗ್ರೆಸ್ ಸರ್ಕಾರ ತನ್ನ ವೋಟ್ ಬ್ಯಾಂಕ್ ಸುಭದ್ರ ಮಾಡಿಕೊಳ್ಳುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande