ಮಾನವೀಯ ಮೌಲ್ಯಗಳಿಗೆ ಬಸವ ತತ್ವಗಳು ದಾರಿದೀಪ : ಈಶ್ವರ ಖಂಡ್ರೆ
ಹೈದರಾಬಾದ್, 23 ಮೇ (ಹಿ.ಸ.) : ಆ್ಯಂಕರ್ : ಸಚಿವ ಈಶ್ವರ ಖಂಡ್ರೆ ಅವರು ಹೈದರಾಬಾದ್ನ ಕುಕ್ಕಟಪಲ್ಲಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ, ತೆಲಂಗಾಣ ಘಟಕ ವತಿಯಿಂದ ಆಯೋಜಿಸಲಾದ ಶ್ರೀ ಅದಿ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಹಾಗೂ ಶ್ರೀ ಮಹಾತ್ಮ ಬಸವೇಶ್ವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗ
ಖಂಡ್ರೆ


ಹೈದರಾಬಾದ್, 23 ಮೇ (ಹಿ.ಸ.) :

ಆ್ಯಂಕರ್ : ಸಚಿವ ಈಶ್ವರ ಖಂಡ್ರೆ ಅವರು ಹೈದರಾಬಾದ್ನ ಕುಕ್ಕಟಪಲ್ಲಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ, ತೆಲಂಗಾಣ ಘಟಕ ವತಿಯಿಂದ ಆಯೋಜಿಸಲಾದ ಶ್ರೀ ಅದಿ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಹಾಗೂ ಶ್ರೀ ಮಹಾತ್ಮ ಬಸವೇಶ್ವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಂಚಾಚಾರ್ಯರು ಹಾಗೂ ಬಸವಾದಿ ಶರಣರು ಮಾನವ ಧರ್ಮ, ಸಮಾನತೆ, ಕಾಯಕ ಮತ್ತು ದಾಸೋಹದ ಮಹತ್ವವನ್ನು ವಿಶ್ವಕ್ಕೆ ಸಾರಿದ್ದಾರೆ ಎಂದು ಹೇಳಿದರು.

ಜಾತಿ, ಮತ ಹಾಗೂ ಪಂಥಗಳ ಭೇದವಿಲ್ಲದೆ ಎಲ್ಲರೂ ಒಂದೇ ಎಂಬ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಬಸವ ತತ್ವಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಅಭಿಪ್ರಾಯಪಟ್ಟರು.

ಸಮಾಜದ ಏಕತೆ, ಸಂಘಟನೆ ಹಾಗೂ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಇನ್ನಷ್ಟು ಸಮರ್ಪಣಾಭಾವದಿಂದ ಕಾರ್ಯನಿರ್ವಹಿಸುವ ಸಂಕಲ್ಪವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು. ಸಮಾಜದ ಪ್ರಗತಿಗೆ ಯುವಜನತೆ ಮತ್ತು ಸಂಘಟನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಕಾಶಿ ಜಗದ್ಗುರುಗಳು, ಉಜ್ಜಯಿನಿ ಜಗದ್ಗುರುಗಳು ಹಾಗೂ ಶ್ರೀಶೈಲ ಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು.

ಇದೇ ವೇಳೆ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಈಶ್ವರ ಖಂಡ್ರೆ ಅವರನ್ನು ತೆಲಂಗಾಣ ರಾಜ್ಯ ಘಟಕದ ಪದಾಧಿಕಾರಿಗಳು ಹಾಗೂ ಜಗದ್ಗುರುಗಳು ಅಭಿನಂದಿಸಿ ಆಶೀರ್ವದಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande