ಎಬೋಲಾ ಬಗ್ಗೆ ಆತಂಕ ಬೇಡ : ದಿನೇಶ್ ಗುಂಡೂರಾವ್
ಬೆಂಗಳೂರು, 23 ಮೇ (ಹಿ.ಸ.) : ಆ್ಯಂಕರ್ : ಎಬೋಲಾ ವೈರಸ್ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ, ಆದರೆ ಜಾಗರೂಕರಾಗಿರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ಅಧಿಕಾರಿಗಳು ಕೇಂದ್ರ ಸರ್ಕಾರದ ಅ
DGR


ಬೆಂಗಳೂರು, 23 ಮೇ (ಹಿ.ಸ.) :

ಆ್ಯಂಕರ್ : ಎಬೋಲಾ ವೈರಸ್ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ, ಆದರೆ ಜಾಗರೂಕರಾಗಿರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ಅಧಿಕಾರಿಗಳು ಕೇಂದ್ರ ಸರ್ಕಾರದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಎಂದು ಹೇಳಿದರು.

ದೇಶದಲ್ಲಿ ಇದುವರೆಗೆ ಯಾವುದೇ ಎಬೋಲಾ ಪ್ರಕರಣ ಪತ್ತೆಯಾಗಿಲ್ಲ. ಅಕ್ಕಪಕ್ಕದ ದೇಶಗಳಲ್ಲಿಯೂ ಸೋಂಕಿನ ಪ್ರಕರಣ ದಾಖಲಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಆದರೂ ಮುಂಜಾಗ್ರತಾ ಕ್ರಮವಾಗಿ ಆಫ್ರಿಕಾ ಖಂಡದ ಉಗಾಂಡಾ ಹಾಗೂ ಕಾಂಗೋ ಸೇರಿದಂತೆ ಕೆಲವು ದೇಶಗಳಿಂದ ಆಗಮಿಸುವವರನ್ನು 21 ದಿನಗಳ ಕಾಲ ನಿಗಾದಲ್ಲಿ ಇರಿಸಲಾಗುವುದು ಎಂದು ತಿಳಿಸಿದರು.

ರೋಗ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ ಅವರು, ರಾಜ್ಯ ಸರ್ಕಾರ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande