
ಚಿತ್ರದುರ್ಗ, 23 ಮೇ (ಹಿ.ಸ.) :
ಆ್ಯಂಕರ್ : ಕ್ಷಯರೋಗಕ್ಕೆ ಉಚಿತ ಹಾಗೂ ನಿಗದಿತ ಚಿಕಿತ್ಸೆ ಲಭ್ಯವಿದ್ದು, ಆರಂಭಿಕ ಹಂತದಲ್ಲೇ ರೋಗ ಪತ್ತೆ ಹಚ್ಚಿ ವೈದ್ಯರ ಸಲಹೆಯಂತೆ 6ರಿಂದ 8 ತಿಂಗಳು ನಿಯಮಿತ ಚಿಕಿತ್ಸೆ ಪಡೆದರೆ ಕ್ಷಯರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದು ಎಂದು ಚಿತ್ರದುರ್ಗ ತಾಲೂಕು ಆರೋಗ್ಯಾಧಿಕಾರಿ ಬಿ.ವಿ. ಗಿರೀಶ್ ಹೇಳಿದರು.
ಚಿತ್ರದುರ್ಗ ತಾಲೂಕಿನ ಹಿರೇಗುಂಟನೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಜಾನ್ ಮೈನ್ಸ್ ಆಫ್ ಆರ್. ಪ್ರವೀಣ್ ಚಂದ್ರ ವಲಯದಲ್ಲಿ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಉಚಿತ ಕ್ಷಯರೋಗ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಕಾರ್ಮಿಕರು ಹಾಗೂ ಸಿಬ್ಬಂದಿಗೆ ಜಾಗೃತಿ ಮೂಡಿಸಿ ಅವರು ಮಾತನಾಡಿದರು.
“ಹೌದು, ನಾವು ಖಂಡಿತವಾಗಿಯೂ ಟಿ.ಬಿ.ಯನ್ನು ಕೊನೆಗೊಳಿಸಬಹುದು” ಎಂಬ ಸಂದೇಶದೊಂದಿಗೆ ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದ ಅವರು, ಕ್ಷಯರೋಗದ ಲಕ್ಷಣಗಳನ್ನು ನಿರ್ಲಕ್ಷಿಸದೆ ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.