ಜೀವವೈವಿಧ್ಯ ಸಂರಕ್ಷಣೆಗೆ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ
ಬೆಂಗಳೂರು, 23 ಮೇ (ಹಿ.ಸ.) : ಆ್ಯಂಕರ್ : ಜೀವವೈವಿಧ್ಯ ಸಂರಕ್ಷಣೆ ಹಾಗೂ ಪರಿಸರ ಜಾಗೃತಿ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಣೆ ಹಂಚಿಕೊಂಡಿರುವ ಅವರು, ತುಡವೆ ಜೇನ
ಖಂಡ್ರೆ


ಬೆಂಗಳೂರು, 23 ಮೇ (ಹಿ.ಸ.) :

ಆ್ಯಂಕರ್ : ಜೀವವೈವಿಧ್ಯ ಸಂರಕ್ಷಣೆ ಹಾಗೂ ಪರಿಸರ ಜಾಗೃತಿ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಣೆ ಹಂಚಿಕೊಂಡಿರುವ ಅವರು, ತುಡವೆ ಜೇನು (ಏಪಿಸ್ ಸೆರಾನಾ) ಅನ್ನು ರಾಜ್ಯ ಕೀಟವಾಗಿ ಹಾಗೂ ಮಲೆನಾಡು ಮರಗಂತಿ ಕಪ್ಪೆ (ಮಲಬಾರ್ ಟ್ರೀ ಟೋಡ್) ಅನ್ನು ರಾಜ್ಯ ಉಭಯಜೀವಿಯಾಗಿ ಘೋಷಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.

ನಾಡಿನ ಅಪರೂಪದ ಜೀವಜಾತಿಗಳನ್ನು ಸಂರಕ್ಷಿಸಿ ಬೆಳೆಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದ್ದು, ಇದು ಪರಿಸರ ಸಂರಕ್ಷಣೆಯತ್ತ ರಾಜ್ಯ ಸರ್ಕಾರ ಇಟ್ಟಿರುವ ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಪ್ರಕೃತಿ ಮತ್ತು ಜೀವವೈವಿಧ್ಯ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮುಂದಿನ ಪೀಳಿಗೆಗೆ ಹಸಿರು ಹಾಗೂ ಆರೋಗ್ಯಕರ ಕರ್ನಾಟಕವನ್ನು ನೀಡುವ ಸಂಕಲ್ಪದೊಂದಿಗೆ ಸರ್ಕಾರ ಕಾರ್ಯನಿರ್ವಹಿಸುತ್ತಿದೆ” ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ರಾಜ್ಯದ ಜೀವ ವೈವಿಧ್ಯ ಸಂಪತ್ತಿನ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವುದು, ಅಪರೂಪದ ಜೀವಜಾತಿಗಳ ಸಂರಕ್ಷಣೆಗೆ ಉತ್ತೇಜನ ನೀಡುವುದು ಹಾಗೂ ಪರಿಸರ ಸಮತೋಲನ ಕಾಪಾಡುವ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande