ಬೆಂಗಳೂರು ರಸ್ತೆ ಸುರಕ್ಷತಾ ಸಮಿತಿಯ ಉನ್ನತ ಮಟ್ಟದ ಸಭೆ
ಬೆಂಗಳೂರು, 23 ಮೇ (ಹಿ.ಸ.) : ಆ್ಯಂಕರ್ : ಬೆಂಗಳೂರು ನಗರದಲ್ಲಿ ರಸ್ತೆ ಸುರಕ್ಷತೆ ಮತ್ತು ಸಂಚಾರ ವ್ಯವಸ್ಥೆ ಸುಧಾರಣೆ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರ ಅಧ್ಯಕ್ಷತೆಯಲ್ಲಿ ರಸ್ತೆ ಸುರಕ್ಷತಾ ಸಮಿತಿಯ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಜಂಟಿ ಪೊಲೀಸ್ ಕಮಿಷನರ್ (ಸಂಚಾರ), ಜಂಟಿ ಕಮ
Meeting


ಬೆಂಗಳೂರು, 23 ಮೇ (ಹಿ.ಸ.) :

ಆ್ಯಂಕರ್ : ಬೆಂಗಳೂರು ನಗರದಲ್ಲಿ ರಸ್ತೆ ಸುರಕ್ಷತೆ ಮತ್ತು ಸಂಚಾರ ವ್ಯವಸ್ಥೆ ಸುಧಾರಣೆ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರ ಅಧ್ಯಕ್ಷತೆಯಲ್ಲಿ ರಸ್ತೆ ಸುರಕ್ಷತಾ ಸಮಿತಿಯ ಉನ್ನತ ಮಟ್ಟದ ಸಭೆ ನಡೆಯಿತು.

ಸಭೆಯಲ್ಲಿ ಜಂಟಿ ಪೊಲೀಸ್ ಕಮಿಷನರ್ (ಸಂಚಾರ), ಜಂಟಿ ಕಮಿಷನರ್ (ಆರ್ಟಿಒ), ಬಿಬಿಎಂಪಿ ಜಂಟಿ ಕಮಿಷನರ್ ಸೇರಿದಂತೆ ಬೆಂಗಳೂರು ಸಂಚಾರ ಪೊಲೀಸ್, ಆರ್ಟಿಒ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ಇತರ ಪ್ರಮುಖ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ನಗರದಾದ್ಯಂತ ರಸ್ತೆ ಸುರಕ್ಷತಾ ಮೂಲಸೌಕರ್ಯಗಳನ್ನು ಮತ್ತಷ್ಟು ಬಲಪಡಿಸುವುದು, ವಾಹನ ದಟ್ಟಣೆ ಮತ್ತು ಸಾರ್ವಜನಿಕರು ಎದುರಿಸುತ್ತಿರುವ ಸಂಚಾರ ಸಮಸ್ಯೆಗಳನ್ನು ಗುರುತಿಸುವುದು ಹಾಗೂ ಅವುಗಳಿಗೆ ಪರಿಣಾಮಕಾರಿ ಪರಿಹಾರ ಕಂಡುಹಿಡಿಯುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸುಗಮ ಸಂಚಾರ ವ್ಯವಸ್ಥೆ, ಸಾರ್ವಜನಿಕರ ಸುರಕ್ಷತೆ ಹಾಗೂ ಸಮಗ್ರ ಟ್ರಾಫಿಕ್ ನಿರ್ವಹಣೆಯನ್ನು ಸುಧಾರಿಸಲು ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುವ ಅಗತ್ಯವನ್ನು ಸಭೆಯಲ್ಲಿ ಒತ್ತಿಹೇಳಲಾಯಿತು.

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳು, ಟ್ರಾಫಿಕ್ ನಿಯಂತ್ರಣ ವ್ಯವಸ್ಥೆಗಳ ಬಲವರ್ಧನೆ, ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳು ಹಾಗೂ ನಗರ ಸಂಚಾರ ವ್ಯವಸ್ಥೆಯನ್ನು ಆಧುನೀಕರಿಸುವ ಬಗ್ಗೆ ಅಧಿಕಾರಿಗಳು ಸಲಹೆ-ಸೂಚನೆಗಳನ್ನು ಹಂಚಿಕೊಂಡರು.

ನಗರದಲ್ಲಿ ಸುರಕ್ಷಿತ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande