
ಬೆಂಗಳೂರು, 23 ಮೇ (ಹಿ.ಸ.) :
ಆ್ಯಂಕರ್ : “ಪಂ. ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026” ಅಂಗವಾಗಿ ಭಾಜಪ ಬೆಂಗಳೂರು ಉತ್ತರ ಜಿಲ್ಲೆಯ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಕಾರ್ಯಕ್ರಮದಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ಸಿದ್ಧಾಂತ, ಸಂಘಟನೆ ಮತ್ತು ರಾಷ್ಟ್ರಸೇವೆಯ ಮೌಲ್ಯಗಳನ್ನು ತಳಮಟ್ಟದ ಕಾರ್ಯಕರ್ತರಿಗೆ ತಲುಪಿಸುವಲ್ಲಿ ಇಂತಹ ಪ್ರಶಿಕ್ಷಣ ವರ್ಗಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಪಕ್ಷದ ಸಂಘಟನೆ ಇನ್ನಷ್ಟು ಬಲಿಷ್ಠವಾಗಬೇಕಾದರೆ ಕಾರ್ಯಕರ್ತರ ತಾತ್ವಿಕ ಅರಿವು ಮತ್ತು ಜನಸೇವೆಯ ಬದ್ಧತೆ ಹೆಚ್ಚಬೇಕು ಎಂದು ಹೇಳಿದರು.
ಪ್ರಶಿಕ್ಷಣ ಶಿಬಿರಗಳು ಕಾರ್ಯಕರ್ತರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಜೊತೆಗೆ, ಸಮಾಜದ ವಿವಿಧ ವರ್ಗಗಳೊಂದಿಗೆ ಸಂಪರ್ಕ ಸಾಧಿಸಲು ಸಹಕಾರಿ ಆಗುತ್ತವೆ. ಪಕ್ಷದ ಚಿಂತನೆಗಳನ್ನು ಮನೆಮನೆಗೆ ತಲುಪಿಸುವ ಕಾರ್ಯದಲ್ಲಿ ಕಾರ್ಯಕರ್ತರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಆರ್. ಅಶೋಕ್ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.