6ನೇ ಗ್ಯಾರಂಟಿ ‘ಭೂ ಗ್ಯಾರಂಟಿ’ ಯೋಜನೆಗೆ ವೇಗ
ಬೆಂಗಳೂರು, 23 ಮೇ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರದ 6ನೇ ಗ್ಯಾರಂಟಿ ಯೋಜನೆಯಾಗಿ ಘೋಷಿಸಲಾದ ‘ಭೂ ಗ್ಯಾರಂಟಿ’ ಯೋಜನೆಯಡಿ ಬೆಂಗಳೂರು ನಗರಾದ್ಯಂತ ಹಮ್ಮಿಕೊಂಡಿರುವ ‘ನನ್ನ ಇ-ಖಾತಾ ನನ್ನ ಹಕ್ಕು’ ಅಭಿಯಾನಕ್ಕೆ ಮತ್ತಷ್ಟು ಚುರುಕು ನೀಡಲಾಗಿದೆ. ಈ ಅಭಿಯಾನದ ಅಂಗವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕು
DkS


ಬೆಂಗಳೂರು, 23 ಮೇ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರದ 6ನೇ ಗ್ಯಾರಂಟಿ ಯೋಜನೆಯಾಗಿ ಘೋಷಿಸಲಾದ ‘ಭೂ ಗ್ಯಾರಂಟಿ’ ಯೋಜನೆಯಡಿ ಬೆಂಗಳೂರು ನಗರಾದ್ಯಂತ ಹಮ್ಮಿಕೊಂಡಿರುವ ‘ನನ್ನ ಇ-ಖಾತಾ ನನ್ನ ಹಕ್ಕು’ ಅಭಿಯಾನಕ್ಕೆ ಮತ್ತಷ್ಟು ಚುರುಕು ನೀಡಲಾಗಿದೆ.

ಈ ಅಭಿಯಾನದ ಅಂಗವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಗೊಟ್ಟಿಗೆರೆಯ 194ನೇ ವಾರ್ಡ್ನ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಇ-ಖಾತಾ ನೋಂದಣಿ ಪ್ರಕ್ರಿಯೆ, ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಸೇವೆಗಳು ಹಾಗೂ ದಾಖಲೆಗಳ ಪರಿಶೀಲನೆ ಕಾರ್ಯವನ್ನು ಅವಲೋಕಿಸಿದ ಡಿಕೆ ಶಿವಕುಮಾರ್, ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಬಳಿಕ ಅರ್ಹ ಆಸ್ತಿ ಮಾಲೀಕರಿಗೆ ಇ-ಖಾತೆಗಳನ್ನು ವಿತರಿಸಿದರು.

‘ನನ್ನ ಇ-ಖಾತಾ ನನ್ನ ಹಕ್ಕು’ ಅಭಿಯಾನದ ಮೂಲಕ ನಾಗರಿಕರಿಗೆ ಆಸ್ತಿ ದಾಖಲೆಗಳನ್ನು ಸುಲಭ ಹಾಗೂ ಪಾರದರ್ಶಕ ರೀತಿಯಲ್ಲಿ ಒದಗಿಸುವ ಉದ್ದೇಶ ಸರ್ಕಾರದ್ದಾಗಿದೆ. ನಗರ ಪ್ರದೇಶಗಳಲ್ಲಿ ಆಸ್ತಿ ದಾಖಲೆಗಳ ಡಿಜಿಟಲೀಕರಣಕ್ಕೆ ಉತ್ತೇಜನ ನೀಡುವ ಜೊತೆಗೆ, ನಾಗರಿಕರ ಹಕ್ಕುಗಳನ್ನು ಭದ್ರಪಡಿಸುವ ಕಾರ್ಯವೂ ಈ ಯೋಜನೆಯ ಮೂಲಕ ನಡೆಯುತ್ತಿದೆ.

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಬಿಬಿಎಂಪಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande