ನನ್ನ ಖಾತಾ – ನನ್ನ ಹಕ್ಕು ಅಭಿಯಾನಕ್ಕೆ ಚಾಲನೆ
ಬೆಂಗಳೂರು, 23 ಮೇ (ಹಿ.ಸ.) : ಆ್ಯಂಕರ್ : ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆ ವತಿಯಿಂದ ಸರ್ಕಾರದ 6ನೇ ಗ್ಯಾರಂಟಿ ಯೋಜನೆಯಾದ ‘ಭೂ ಗ್ಯಾರಂಟಿ’ ಅಡಿಯಲ್ಲಿ ಬಸವನಗುಡಿ ಕಂದಾಯ ವಿಭಾಗದಲ್ಲಿ ಆಯೋಜಿಸಲಾದ “ನನ್ನ ಖಾತಾ – ನನ್ನ ಹಕ್ಕು” ಅಭಿಯಾನಕ್ಕೆ ಶನಿವಾರ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಬಸವನಗುಡಿ
ಖಾತಾ ಅಭಿಯಾನ


ಬೆಂಗಳೂರು, 23 ಮೇ (ಹಿ.ಸ.) :

ಆ್ಯಂಕರ್ : ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆ ವತಿಯಿಂದ ಸರ್ಕಾರದ 6ನೇ ಗ್ಯಾರಂಟಿ ಯೋಜನೆಯಾದ ‘ಭೂ ಗ್ಯಾರಂಟಿ’ ಅಡಿಯಲ್ಲಿ ಬಸವನಗುಡಿ ಕಂದಾಯ ವಿಭಾಗದಲ್ಲಿ ಆಯೋಜಿಸಲಾದ “ನನ್ನ ಖಾತಾ – ನನ್ನ ಹಕ್ಕು” ಅಭಿಯಾನಕ್ಕೆ ಶನಿವಾರ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಬಸವನಗುಡಿ ಕ್ಷೇತ್ರದ ಶಾಸಕ ಎಲ್. ಎ. ರವಿ ಸುಬ್ರಹ್ಮಣ್ಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸ್ಥಳದಲ್ಲಿಯೇ ಖಾತಾ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಆಸ್ತಿ ಮಾಲಿಕರು ಖಾತೆಗೆ ಸಂಬಂಧಿಸಿದ ವಿವಿಧ ಸೌಲಭ್ಯಗಳನ್ನು ಈ ಅಭಿಯಾನದ ಮೂಲಕ ಸುಲಭವಾಗಿ ಪಡೆಯಬಹುದಾಗಿದೆ ಎಂದು ತಿಳಿಸಿದರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಅಭಿಯಾನದ ಮೂಲಕ ಖಾತಾ ನೋಂದಣಿ, ದಾಖಲೆ ಪರಿಶೀಲನೆ, ಖಾತಾ ವರ್ಗಾವಣೆ ಸೇರಿದಂತೆ ಹಲವು ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸಲಾಗುತ್ತಿದೆ. ಇದರಿಂದ ಸಾರ್ವಜನಿಕರ ಸಮಯ ಹಾಗೂ ಆಡಳಿತಾತ್ಮಕ ತೊಂದರೆ ಕಡಿಮೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಾಲಿಕೆ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande