
ಶಿವಮೊಗ್ಗ, 23 ಮೇ (ಹಿ.ಸ.) :
ಆ್ಯಂಕರ್ : ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮೇ 27 ರಂದು ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಸಾಗರ ತಾಲೂಕು ಹೊಸನಗರದ ಗಂಗನಕೊಪ್ಪ ಹೋಲಿ ರಿಡೀಮರ್ ಕಾಂಪೋಸಿಟ್ ಕಾಲೇಜ್ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಎಕೆಪಿ ಹೆಲ್ತ್ ಕೇರ್ ಪ್ರೈ, ಲಿ., ಹದಡಿ ರಸ್ತೆ, ತರಳಬಾಳು ಶಾಲೆ ಎದುರು, ದಾವಣಗೆರೆ ಇಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ.
ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಮತ್ತು ಪಿಂಚಣಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.