ಬಕ್ರೀದ್ ಹಬ್ಬ ಹಿನ್ನೆಲೆ ಬಾಗಲಕೋಟೆಯಲ್ಲಿ ಶಾಂತಿ ಸಭೆ
ಬಾಗಲಕೋಟೆ, 23 ಮೇ (ಹಿ.ಸ.) : ಆ್ಯಂಕರ್ : ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಬಾಗಲಕೋಟೆ ಶಹರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ಆಯೋಜಿಸಲಾಯಿತು. ಸಭೆಯಲ್ಲಿ ಸ್ಥಳೀಯ ಧಾರ್ಮಿಕ ಮುಖಂಡರು, ಸಮಾಜದ ಹಿರಿಯರು ಹಾಗೂ ವಿವಿಧ ಸಮುದಾಯಗಳ ಪ್ರತಿನಿಧಿಗಳು ಭಾಗವಹಿಸಿ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆ
Peace meeting


ಬಾಗಲಕೋಟೆ, 23 ಮೇ (ಹಿ.ಸ.) :

ಆ್ಯಂಕರ್ : ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಬಾಗಲಕೋಟೆ ಶಹರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ಆಯೋಜಿಸಲಾಯಿತು.

ಸಭೆಯಲ್ಲಿ ಸ್ಥಳೀಯ ಧಾರ್ಮಿಕ ಮುಖಂಡರು, ಸಮಾಜದ ಹಿರಿಯರು ಹಾಗೂ ವಿವಿಧ ಸಮುದಾಯಗಳ ಪ್ರತಿನಿಧಿಗಳು ಭಾಗವಹಿಸಿ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವ ಕುರಿತು ಚರ್ಚಿಸಿದರು.

ಪೊಲೀಸ್ ಅಧಿಕಾರಿಗಳು ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮಹತ್ವವನ್ನು ವಿವರಿಸಿ, ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು.

ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪರಸ್ಪರ ಸಹಕಾರದಿಂದ ನಡೆದುಕೊಳ್ಳಬೇಕು ಎಂದು ತಿಳಿಸಿದರು.

ಸಾಮಾಜಿಕ ಸಾಮರಸ್ಯ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಹಬ್ಬದ ಸಂಭ್ರಮವನ್ನು ಶಾಂತಿಯುತ ವಾತಾವರಣದಲ್ಲಿ ಆಚರಿಸಬೇಕು ಎಂದು ಸಭೆಯಲ್ಲಿ ಕರೆ ನೀಡಲಾಯಿತು.

ಸಭೆಯಲ್ಲಿ ಸಾರ್ವಜನಿಕರು ಹಾಗೂ ಧಾರ್ಮಿಕ ಮುಖಂಡರು ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡುವ ಭರವಸೆ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande