ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ಕೇಂದ್ರ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ
ನವದೆಹಲಿ, 23 ಮೇ (ಹಿ.ಸ.) : ಆ್ಯಂಕರ್ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, “ಪೆಟ್ರ
Kharge post


ನವದೆಹಲಿ, 23 ಮೇ (ಹಿ.ಸ.) :

ಆ್ಯಂಕರ್ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, “ಪೆಟ್ರೋಲ್ ಈಗ ₹100 ದಾಟಿದೆ. ಸಾರ್ವಜನಿಕರ ಗಳಿಕೆಯನ್ನು ಕಂತುಗಳಲ್ಲಿ ಲೂಟಿ ಮಾಡಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಗಳಿಂದ ಪ್ರತಿದಿನ ಸಾವಿರಾರು ಕೋಟಿ ರೂಪಾಯಿ ಸಂಗ್ರಹಿಸುತ್ತಿದ್ದರೂ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿದಾಗ ಅದರ ಲಾಭವನ್ನು ಸಾರ್ವಜನಿಕರಿಗೆ ನೀಡಲಿಲ್ಲ ಎಂದು ಖರ್ಗೆ ಟೀಕಿಸಿದ್ದಾರೆ.

“ಬಿಕ್ಕಟ್ಟು ಬಂದಾಗ ಸರ್ಕಾರ ಚುನಾವಣೆಗಳಲ್ಲಿ ನಿರತರಾಗಿತ್ತು. ಚುನಾವಣೆಗಳ ಬಳಿಕ ಜನರಿಗೆ ತ್ಯಾಗದ ಪಾಠ ಹೇಳಲಾಯಿತು. ನಂತರ ಕೇವಲ ಎಂಟು ದಿನಗಳಲ್ಲಿ ಮೂರು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಸಲಾಯಿತು” ಎಂದು ಅವರು ಆರೋಪಿಸಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾದ ಸಂದರ್ಭದಲ್ಲಿ ಅನೇಕ ದೇಶಗಳು ತಮ್ಮ ನಾಗರಿಕರಿಗೆ ತೆರಿಗೆ ಕಡಿತ ಹಾಗೂ ಸಬ್ಸಿಡಿ ಮೂಲಕ ಪರಿಹಾರ ನೀಡಿದವು ಎಂದು ಖರ್ಗೆ ಉಲ್ಲೇಖಿಸಿದ್ದಾರೆ.

ಇಟಲಿ, ಆಸ್ಟ್ರೇಲಿಯಾ, ಜರ್ಮನಿ, ಯುನೈಟೆಡ್ ಕಿಂಗ್ಡಮ್ ಹಾಗೂ ಐರ್ಲೆಂಡ್ ಸರ್ಕಾರಗಳು ಇಂಧನ ಮೇಲಿನ ತೆರಿಗೆ ಕಡಿತ ಹಾಗೂ ಆರ್ಥಿಕ ಪ್ಯಾಕೇಜ್ಗಳನ್ನು ಘೋಷಿಸಿ ಜನರಿಗೆ ನೆರವಾಗಿದ್ದವು ಎಂದು ಅವರು ತಿಳಿಸಿದ್ದಾರೆ.

“ಈ ಲೂಟಿಯ ಹಣ ಯಾರಿಗೆ ಹೋಗುತ್ತಿದೆ? ಸರ್ಕಾರ ಯಾಕೆ ಇಷ್ಟೊಂದು ರಾಜಿ ಮಾಡಿಕೊಂಡಿದೆ? ದೇಶದಲ್ಲಿ ನಿಜವಾದ ನಾಯಕತ್ವದ ಬಿಕ್ಕಟ್ಟು ಇದೆ ಎಂಬುದನ್ನು 140 ಕೋಟಿ ಭಾರತೀಯರು ಈಗ ಅರ್ಥಮಾಡಿಕೊಂಡಿದ್ದಾರೆ” ಎಂದು ಖರ್ಗೆ ತಮ್ಮ ಹೇಳಿಕೆಯಲ್ಲಿ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande