
ತುಮಕೂರು, 23 ಮೇ (ಹಿ.ಸ.) :
ಆ್ಯಂಕರ್ : ಶಾಸಕ ಕೆ.ಎನ್. ರಾಜಣ್ಣ ಅವರು ತಮ್ಮ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮಿಡಿಗೇಶಿ ಹೋಬಳಿಯ ಪಡಸಲಹಟ್ಟಿ, ಲಕ್ಲಿಹಟ್ಟಿ ಗೊಲ್ಲರಹಟ್ಟಿ ಹಾಗೂ ಆರ್. ಗೊಲ್ಲರಹಟ್ಟಿ ಗ್ರಾಮಗಳಿಗೆ ಹೊಂದಿಕೊಂಡಿರುವ ಹಳ್ಳಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿ ಸುಮಾರು 396 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದರು.
ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಹುದ್ದೆಯ ಆದೇಶ ಪತ್ರಗಳನ್ನು ವಿತರಿಸಲಾಯಿತು. ಇದೇ ವೇಳೆ ಶಾಲಾ ಮಕ್ಕಳಿಗೆ ಉಚಿತ ನೋಟ್ಬುಕ್ಗಳನ್ನು ಹಂಚಿಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರಾಜಣ್ಣ, ಗ್ರಾಮೀಣ ಭಾಗದ ಜನರಿಗೆ ಮೂಲಭೂತ ಹಕ್ಕುಗಳು ಹಾಗೂ ಸರ್ಕಾರಿ ಸೌಲಭ್ಯಗಳು ಸುಲಭವಾಗಿ ದೊರಕುವ ನಿಟ್ಟಿನಲ್ಲಿ ಕಂದಾಯ ಗ್ರಾಮ ಘೋಷಣೆ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.
ಸರ್ಕಾರದ ಯೋಜನೆಗಳು ಗ್ರಾಮೀಣ ಜನರಿಗೆ ಸಮರ್ಪಕವಾಗಿ ತಲುಪಬೇಕು ಎಂಬುದು ತಮ್ಮ ಉದ್ದೇಶ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗೋಟೂರು ಶಿವಪ್ಪ, ಶ್ರೀನಿವಾಸ್, ಲಕ್ಷ್ಮಣ್, ಧನಂಜಯ್, ಜಿ.ಜೆ. ರಾಜಣ್ಣ, ಚಂದ್ರಶೇಖರ್ ಗೌಡ, ಮಲ್ಲಿಕಾರ್ಜುನಯ್ಯ, ನಾಗೇಶ್ ಬಾಬು, ಎನ್. ಗೋಪಾಲಯ್ಯ, ಹೊಂಬಾಳೆ ಗೌಡ, ನಾಗಣ್ಣ, ಅಡವಣ್ಣ, ಎಂ.ಜಿ. ಶ್ರೀನಿವಾಸ್ ಮೂರ್ತಿ, ಚಿತ್ತಣ್ಣ, ಶಿವಣ್ಣ, ಅಡವಿ ಚಿತ್ತಣ್ಣ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.