ಹುಬ್ಬಳ್ಳಿಯಲ್ಲಿ ರೋಜ್ಗಾರ್ ಮೇಳ ; 150 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ
ಹುಬ್ಬಳ್ಳಿ, 23 ಮೇ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿಯ ರೈಲ್ವೆ ಆಫೀಸರ್ಸ್ ಕ್ಲಬ್ನಲ್ಲಿ ಆಯೋಜಿಸಲಾದ 19ನೇ ಆವೃತ್ತಿಯ ರೋಜ್‌ಗಾರ್ ಮೇಳದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಭಾಗವಹಿಸಿ ಯುವಕ-ಯುವತಿಯರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ರೋಜ್‌ಗಾರ್
ಜೋಶಿ


ಹುಬ್ಬಳ್ಳಿ, 23 ಮೇ (ಹಿ.ಸ.) :

ಆ್ಯಂಕರ್ : ಹುಬ್ಬಳ್ಳಿಯ ರೈಲ್ವೆ ಆಫೀಸರ್ಸ್ ಕ್ಲಬ್ನಲ್ಲಿ ಆಯೋಜಿಸಲಾದ 19ನೇ ಆವೃತ್ತಿಯ ರೋಜ್‌ಗಾರ್ ಮೇಳದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಭಾಗವಹಿಸಿ ಯುವಕ-ಯುವತಿಯರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ರೋಜ್‌ಗಾರ್ ಮೇಳ ಕಾರ್ಯಕ್ರಮದ ಭಾಗವಾಗಿ ದೇಶದಾದ್ಯಂತ ಸರ್ಕಾರಿ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಯನ್ನು ವೇಗಗೊಳಿಸುವ ನಿಟ್ಟಿನಲ್ಲಿ ಇಂದು 47ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ 51,000ಕ್ಕೂ ಹೆಚ್ಚು ಯುವಕ-ಯುವತಿಯರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು.

ರೋಜ್ಗಾರ್ ಮೇಳವನ್ನು ಭಾರತೀಯ ರೇಲ್ವೆ ವತಿಯಿಂದ ಆಯೋಜಿಸಲಾಗಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಅವರ ಉದ್ಘಾಟನಾ ಭಾಷಣವನ್ನು ಕಾರ್ಯಕ್ರಮದಲ್ಲಿ ವೀಕ್ಷಿಸಲಾಯಿತು.

ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ಈ ಬಾರಿ ಒಟ್ಟು 150 ಅಭ್ಯರ್ಥಿಗಳಿಗೆ ವಿವಿಧ ಕೇಂದ್ರ ಸರ್ಕಾರಿ ಸಂಸ್ಥೆಗಳಲ್ಲಿ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು. ವಿವಿಧ ಇಲಾಖೆಗಳ ಹುದ್ದೆಗಳ ವಿವರಗಳು ಹೀಗಿವೆ: ಭಾರತೀಯ ರೈಲ್ವೆ – 26, ಇಂಡಿಯಾ ಪೋಸ್ಟ್ – 17, ನೌಕರರ ರಾಜ್ಯ ವಿಮಾ ನಿಗಮ – 06, ಬ್ಯಾಂಕ್ ಆಫ್ ಬರೋಡಾ – 37, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ – 10, ಕೆನರಾ ಬ್ಯಾಂಕ್ – 08 ಹಾಗೂ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರಗಿ – 46.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಯುವಪೀಳಿಗೆ ದೇಶದ ಅಭಿವೃದ್ಧಿಯ ಪ್ರಮುಖ ಶಕ್ತಿ ಎಂದು ಹೇಳಿ, 2047ರ ವೇಳೆಗೆ ‘ವಿಕಸಿತ ಭಾರತ’ ನಿರ್ಮಾಣದಲ್ಲಿ ಯುವಕರ ಕೊಡುಗೆ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಸರ್ಕಾರಿ ಸಂಸ್ಥೆಗಳ ನೇಮಕಾತಿ ಪ್ರಕ್ರಿಯೆಯನ್ನು ವೇಗಗೊಳಿಸುವ ಮೂಲಕ ಯುವಕರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸಲಾಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ರೈಲ್ವೆ ಜನರಲ್ ಮ್ಯಾನೇಜರ್ ಪಿ. ಅನಂತ, ಡಿವಿಜನಲ್ ರೈಲ್ವೆ ಮ್ಯಾನೇಜರ್ ಬೇಲಾ ಮೀನಾ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande