ನವ ಭಾರತದ ನಿರ್ಮಾಣಕ್ಕೆ ಯುವಶಕ್ತಿ ಆಧಾರ : ಎಚ್.ಡಿ.ಕುಮಾರಸ್ವಾಮಿ
ಪಾಲಕ್ಕಾಡ್, 23 ಮೇ (ಹಿ.ಸ.) : ಆ್ಯಂಕರ್ : ಕೇರಳದ ಪಾಲಕ್ಕಾಡ್ನಲ್ಲಿ ಇಂದು ನಡೆದ 19ನೇ ಆವೃತ್ತಿಯ ರೋಜ್ಗಾರ್ ಮೇಳದಲ್ಲಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಿಗೆ ಆಯ್ಕೆಯಾದ ನೂತನ ನೇಮಕಾತಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭಾಗವಹ
HdK


ಪಾಲಕ್ಕಾಡ್, 23 ಮೇ (ಹಿ.ಸ.) :

ಆ್ಯಂಕರ್ : ಕೇರಳದ ಪಾಲಕ್ಕಾಡ್ನಲ್ಲಿ ಇಂದು ನಡೆದ 19ನೇ ಆವೃತ್ತಿಯ ರೋಜ್ಗಾರ್ ಮೇಳದಲ್ಲಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಿಗೆ ಆಯ್ಕೆಯಾದ ನೂತನ ನೇಮಕಾತಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸಿ ಯುವ ನೇಮಕಾತಿಗಳಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಸಾರ್ವಜನಿಕ ಸೇವೆ ಹಾಗೂ ರಾಷ್ಟ್ರ ನಿರ್ಮಾಣದ ಹೊಸ ಅಧ್ಯಾಯವನ್ನು ಆರಂಭಿಸುತ್ತಿರುವ ಯುವಕರು ದೇಶದ ಭವಿಷ್ಯಕ್ಕೆ ಆಧಾರವಾಗಿದ್ದಾರೆ ಎಂದು ಹೇಳಿದರು. ಇಂದಿನ ಯುವಕರ ಮುಖಗಳಲ್ಲಿ ಕಾಣುತ್ತಿರುವ ಉತ್ಸಾಹ, ಆತ್ಮವಿಶ್ವಾಸ ಮತ್ತು ಆಕಾಂಕ್ಷೆಗಳು ನವ ಭಾರತದ ಶಕ್ತಿಯ ಪ್ರತಿಬಿಂಬವಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶವು “ವಿಕ್ಷಿತ ಭಾರತ” ನಿರ್ಮಾಣದ ಗುರಿಯತ್ತ ವೇಗವಾಗಿ ಸಾಗುತ್ತಿದೆ ಎಂದು ಅವರು ಹೇಳಿದರು. ಉದ್ಯೋಗ ಸೃಷ್ಟಿ, ಪಾರದರ್ಶಕ ನೇಮಕಾತಿ ವ್ಯವಸ್ಥೆ ಹಾಗೂ ಯುವಕರಿಗೆ ಹೆಚ್ಚಿನ ಅವಕಾಶಗಳನ್ನು ಒದಗಿಸುವಲ್ಲಿ ಕೇಂದ್ರ ಸರ್ಕಾರದ ಬದ್ಧತೆಯನ್ನು ಅವರು ಉಲ್ಲೇಖಿಸಿದರು.

ದೇಶದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದು, ಆಡಳಿತದಲ್ಲಿ ಪಾರದರ್ಶಕತೆ ತರುವುದು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಯುವಕರ ಭಾಗವಹಿಸುವಿಕೆಯನ್ನು ವಿಸ್ತರಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಎಂದು ಕುಮಾರಸ್ವಾಮಿ ತಿಳಿಸಿದರು.

ರೋಜ್ಗಾರ್ ಮೇಳವು ಕೇವಲ ನೇಮಕಾತಿ ಪ್ರಕ್ರಿಯೆಯ ವೇದಿಕೆಯಾಗಿರದೇ, ಆಡಳಿತದಲ್ಲಿ ನಂಬಿಕೆ, ದಕ್ಷತೆ ಮತ್ತು ವೇಗವನ್ನು ಹೆಚ್ಚಿಸುವ ಪರಿವರ್ತನಾತ್ಮಕ ಉಪಕ್ರಮವಾಗಿ ಹೊರಹೊಮ್ಮಿದೆ ಎಂದು ಅವರು ಹೇಳಿದರು. ಸಾವಿರಾರು ಯುವ ಪ್ರತಿಭೆಗಳು ದೇಶದ ಸೇವೆಗೆ ಮುಂದೆ ಬರುತ್ತಿರುವುದು ಸಂತಸದ ಸಂಗತಿ ಎಂದು ಅವರು ಅಭಿಪ್ರಾಯಪಟ್ಟರು.

ಹೊಸದಾಗಿ ನೇಮಕಗೊಂಡ ಎಲ್ಲಾ ಅಭ್ಯರ್ಥಿಗಳಿಗೆ ಹಾಗೂ ಅವರ ಕುಟುಂಬಗಳಿಗೆ ಅಭಿನಂದನೆ ಸಲ್ಲಿಸಿದ ಕುಮಾರಸ್ವಾಮಿ ಅವರು, ಅವರ ಮುಂದಿನ ಜೀವನ ಯಶಸ್ವಿ ಹಾಗೂ ಉಜ್ವಲವಾಗಿರಲಿ ಎಂದು ಹಾರೈಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande