ಸಂತ್ರಸ್ತರಿಗೆ ತ್ವರಿತ ಹಾಗೂ ನ್ಯಾಯಯುತ ಪರಿಹಾರ ನೀಡಲು ಸಚಿವ ಆರ್.ಬಿ. ತಿಮ್ಮಾಪುರ ಸೂಚನೆ
ಬಾಗಲಕೋಟೆ, 23 ಮೇ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ನಗರದ ನವನಗರದಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೇಪಿ) ಪುನರ್ವಸತಿ ಮತ್ತು ಪುನರ್ ನಿರ್ಮಾಣ ಆಯುಕ್ತರ ಕಚೇರಿಯ ‘ಸಂಗಮ’ ಸಭಾಂಗಣದಲ್ಲಿ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಮುಳುಗಡೆ ಜಮೀನಿಗೆ ಸಂಬಂಧಿಸಿದ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ
Meeting


ಬಾಗಲಕೋಟೆ, 23 ಮೇ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ನಗರದ ನವನಗರದಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೇಪಿ) ಪುನರ್ವಸತಿ ಮತ್ತು ಪುನರ್ ನಿರ್ಮಾಣ ಆಯುಕ್ತರ ಕಚೇರಿಯ ‘ಸಂಗಮ’ ಸಭಾಂಗಣದಲ್ಲಿ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಮುಳುಗಡೆ ಜಮೀನಿಗೆ ಸಂಬಂಧಿಸಿದ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ವಿಚಾರಗಳ ಕುರಿತು ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವ ಆರ್.ಬಿ. ತಿಮ್ಮಾಪುರ, ಮುಳುಗಡೆ ಸಂತ್ರಸ್ತರಿಗೆ ತ್ವರಿತಗತಿಯಲ್ಲಿ ನ್ಯಾಯಯುತ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮುಳುಗಡೆ ಪ್ರದೇಶದ ಜನರು ಹಲವು ವರ್ಷಗಳಿಂದ ಸಂಕಷ್ಟ ಅನುಭವಿಸುತ್ತಿದ್ದು, ಅವರ ಬದುಕು ಪುನರ್ ನಿರ್ಮಾಣವಾಗಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದರು. ಸಂತ್ರಸ್ತರ ಹಿತರಕ್ಷಣೆ ಹಾಗೂ ಪುನರ್ವಸತಿ ಕಾರ್ಯಗಳಲ್ಲಿ ಯಾವುದೇ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ ಎಂದು ಎಚ್ಚರಿಸಿದರು.

ಭೂಸ್ವಾಧೀನ ಪ್ರಕ್ರಿಯೆ, ಪರಿಹಾರ ವಿತರಣೆ, ಪುನರ್ವಸತಿ ಸೌಲಭ್ಯಗಳು ಹಾಗೂ ಬಾಕಿ ಉಳಿದಿರುವ ಪ್ರಕರಣಗಳ ಕುರಿತು ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದು ಸಚಿವರು ಪರಿಶೀಲನೆ ನಡೆಸಿದರು. ಸಂತ್ರಸ್ತರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಹಿಡಿದು, ಸರ್ಕಾರದ ಯೋಜನೆಗಳ ಲಾಭ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಶಾಸಕರಾದ ಜೆ.ಟಿ. ಪಾಟೀಲ್, ಜಗದೀಶ ಗುಡಗುಂಟಿ, ಉಮೇಶ್ ಮೇಟಿ, ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande