ಸವದತ್ತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಸೇರಿದ ಬಿಜೆಪಿ ಮುಖಂಡರು
ಸವದತ್ತಿ, 24 ಮೇ (ಹಿ.ಸ.) : ಆ್ಯಂಕರ್ : ಸವದತ್ತಿ ಯಲ್ಲಮ್ಮ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತಷ್ಟು ಬಲಿಷ್ಠವಾಗಿದ್ದು, ವಿವಿಧ ಗ್ರಾಮಗಳ ನೂರಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಸವದತ್ತಿ ಕ್ಷೇತ್ರದ ಶಾಸಕ ವಿಶ್ವಾಸ್ ವೈದ್
Joining


ಸವದತ್ತಿ, 24 ಮೇ (ಹಿ.ಸ.) :

ಆ್ಯಂಕರ್ : ಸವದತ್ತಿ ಯಲ್ಲಮ್ಮ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತಷ್ಟು ಬಲಿಷ್ಠವಾಗಿದ್ದು, ವಿವಿಧ ಗ್ರಾಮಗಳ ನೂರಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.

ಸವದತ್ತಿ ಕ್ಷೇತ್ರದ ಶಾಸಕ ವಿಶ್ವಾಸ್ ವೈದ್ಯ ಅವರ ಗೃಹ ಕಚೇರಿಯಲ್ಲಿ ನಡೆದ ಬೃಹತ್ ಸೇರ್ಪಡೆ ಸಭೆಯಲ್ಲಿ ಕ್ಷೇತ್ರದ ಮಾಜಿ ಶಾಸಕ ಆರ್. ವಿ. ಪಾಟೀಲ್ ಅವರ ಜಂಟಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

ಸಭೆಯಲ್ಲಿ ರೈನಾಪೂರ, ಸವದತ್ತಿ, ಮುನವಳ್ಳಿ, ಬೆನಕಟ್ಟಿ, ಆಲದಕಟ್ಟಿ, ಮಬನೂರ, ಮೆಳ್ಳಿಕೇರಿ, ಕಡಬಿ ಹಾಗೂ ಜೀವಾಪೂರ ಸೇರಿದಂತೆ ವಿವಿಧ ಗ್ರಾಮಗಳ ಬಿಜೆಪಿ ಪಕ್ಷದ ಪ್ರಮುಖ ಮುಖಂಡರು, ಹಿರಿಯರು ಹಾಗೂ ಯುವ ಕಾರ್ಯಕರ್ತರು ತಮ್ಮ ಪಕ್ಷವನ್ನು ತೊರೆದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಪಕ್ಷಕ್ಕೆ ಹೊಸದಾಗಿ ಸೇರ್ಪಡೆಯಾದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದ ಶಾಲು ಹೊದಿಸಿ, ಪಕ್ಷದ ಧ್ವಜವನ್ನು ಹಸ್ತಾಂತರಿಸುವ ಮೂಲಕ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವಿಶ್ವಾಸ ವೈದ್ಯ ಅವರು, “ಸವದತ್ತಿ ಕ್ಷೇತ್ರದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜನಪರ ಗ್ಯಾರಂಟಿ ಯೋಜನೆಗಳ ಪರಿಣಾಮವಾಗಿ ಜನರು ಕಾಂಗ್ರೆಸ್ ಪಕ್ಷದತ್ತ ಹೆಚ್ಚಿನ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಕ್ಷೇತ್ರಾದ್ಯಂತ ಪಕ್ಷದ ಸಂಘಟನೆ ದಿನದಿಂದ ದಿನಕ್ಕೆ ಮತ್ತಷ್ಟು ಬಲಿಷ್ಠವಾಗುತ್ತಿದೆ,” ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಹಾಗೂ ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ಎಲ್ಲರೂ ಒಗ್ಗಟ್ಟಿನಿಂದ, ಹೆಗಲಿಗೆ ಹೆಗಲು ಕೊಟ್ಟು ಶ್ರಮಿಸಬೇಕೆಂದು ಕರೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ಮುಖಂಡರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande