ಭಟ್ಕಳ ದುರಂತ ; ಮುಖ್ಯಮಂತ್ರಿ ಸಂತಾಪ, ಪರಿಹಾರ ಘೋಷಣೆ
ಬೆಂಗಳೂರು, 24 ಮೇ (ಹಿ.ಸ.) : ಆ್ಯಂಕರ್ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಕ್ಸನ
ಭಟ್ಕಳ ದುರಂತ ; ಮುಖ್ಯಮಂತ್ರಿ ಸಂತಾಪ, ಪರಿಹಾರ ಘೋಷಣೆ


ಬೆಂಗಳೂರು, 24 ಮೇ (ಹಿ.ಸ.) :

ಆ್ಯಂಕರ್ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಎಕ್ಸನಲ್ಲಿ ಸಂತಾಪ ಸಂದೇಶ ಹಂಚಿಕೊಂಡಿರುವ ಅವರು,

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು.

ಇನ್ನೂ ಕೆಲವರು ಈ ದುರ್ಘಟನೆಯಲ್ಲಿ ಕಾಣೆಯಾಗಿರುವ ಮಾಹಿತಿಯಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಕಾಣೆಯಾದವರು ಬದುಕಿಬಂದು ತಮ್ಮವರನ್ನು ಕೂಡಿಕೊಳ್ಳಲಿ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸೋಣ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande