
ಬೆಂಗಳೂರು, 24 ಮೇ (ಹಿ.ಸ.) :
ಆ್ಯಂಕರ್ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಆರಿಸಲು ಹೋಗಿದ್ದ 9 ಮಂದಿ ನೀರು ಪಾಲಾಗಿ ಮೃತಪಟ್ಟ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ದುರಂತದ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ ಅವರು ಮಾಹಿತಿ ನೀಡಿದ್ದಾರೆ, ಅವರಿಗೆ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದೇನೆ. ಈಗಾಗಲೇ ಅಗತ್ಯ ರಕ್ಷಣಾ ಕಾರ್ಯಾಚರಣೆ ಹಾಗೂ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಸರ್ಕಾರದಿಂದ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ಘೋಷಿಸಲಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬದವರಿಗೆ ಈ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.