ಗಣಿಬಾಧಿತ ಗ್ರಾಮಗಳ ಮಹಿಳೆಯರಿಗೆ ಹೈನುರಾಸು ಯೋಜನೆ : ಅರ್ಜಿ ಆಹ್ವಾನ
ಚಿತ್ರದುರ್ಗ, 24 ಮೇ (ಹಿ.ಸ.) : ಆ್ಯಂಕರ್ : ಗಣಿಬಾಧಿತ ಪ್ರದೇಶಗಳ ಸಮಗ್ರ ಅಭಿವೃದ್ಧಿ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಗಣಿಬಾಧಿತ ಹಾಗೂ ಪ್ರಭಾವಿತ ಗ್ರಾಮಗಳ ಸ್ವಸಹಾಯ ಸಂಘಗಳ ಮಹಿಳೆಯರಿಗೆ ಹೈನುರಾಸು ವಿತರಣೆ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿ
ಗಣಿಬಾಧಿತ ಗ್ರಾಮಗಳ ಮಹಿಳೆಯರಿಗೆ ಹೈನುರಾಸು ಯೋಜನೆ : ಅರ್ಜಿ ಆಹ್ವಾನ


ಚಿತ್ರದುರ್ಗ, 24 ಮೇ (ಹಿ.ಸ.) :

ಆ್ಯಂಕರ್ : ಗಣಿಬಾಧಿತ ಪ್ರದೇಶಗಳ ಸಮಗ್ರ ಅಭಿವೃದ್ಧಿ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಗಣಿಬಾಧಿತ ಹಾಗೂ ಪ್ರಭಾವಿತ ಗ್ರಾಮಗಳ ಸ್ವಸಹಾಯ ಸಂಘಗಳ ಮಹಿಳೆಯರಿಗೆ ಹೈನುರಾಸು ವಿತರಣೆ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಜೂನ್ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅರ್ಹ ಮಹಿಳೆಯರು ತಮ್ಮ ಗ್ರಾಮ ಪಂಚಾಯಿತಿ ಜಿಪಿಎಲ್ಎಫ್ ಮುಖಾಂತರ ಅರ್ಜಿ ಸಲ್ಲಿಸಬಹುದು.

ಚಿತ್ರದುರ್ಗ, ಹೊಳಲ್ಕೆರೆ ಮತ್ತು ಹೊಸದುರ್ಗ ತಾಲ್ಲೂಕುಗಳ ಒಟ್ಟು 187 ಗಣಿಬಾಧಿತ ಗ್ರಾಮಗಳ ಮಹಿಳಾ ಫಲಾನುಭವಿಗಳಿಗೆ ಈ ಯೋಜನೆಯ ಸೌಲಭ್ಯ ದೊರೆಯಲಿದೆ. ಯೋಜನೆಯಡಿ ಪರಿಶಿಷ್ಟ ಜಾತಿಯ 339, ಪರಿಶಿಷ್ಟ ಪಂಗಡದ 137 ಹಾಗೂ ಸಾಮಾನ್ಯ ವರ್ಗದ 2703 ಸೇರಿ ಒಟ್ಟು 3179 ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕ ಡಾ. ಸಿ. ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande