
ಧಾರವಾಡ, 24 ಮೇ (ಹಿ.ಸ.) :
ಆ್ಯಂಕರ್ : ಧಾರವಾಡ ಪೊಲೀಸ್ ಹೆಡ್ ಕ್ವಾಟರ್ಸ್ ದುರ್ಗಾದೇವಿ ದೇವಾಲಯ ಸಭಾಂಗಣದಲ್ಲಿ ಭಾನುವಾರ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮುಖಂಡರ ಕುಂದುಕೊರತೆ ಸಭೆ ಆಯೋಜಿಸಲಾಯಿತು.
ಸಭೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮುಖಂಡರು ತಮ್ಮ ಸಮುದಾಯಕ್ಕೆ ಸಂಬಂಧಿಸಿದ ಸಮಸ್ಯೆಗಳು, ಸಾಮಾಜಿಕ ಭದ್ರತೆ, ಕಾನೂನು ಸುವ್ಯವಸ್ಥೆ, ಅಕ್ರಮ ಚಟುವಟಿಕೆಗಳು, ಸಾರ್ವಜನಿಕ ಸೌಲಭ್ಯಗಳ ಕೊರತೆ ಸೇರಿದಂತೆ ಹಲವು ವಿಷಯಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು.
ಸಭೆಯಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳು ಮುಖಂಡರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಪಾಲನೆಗೆ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಅಧಿಕಾರಿಗಳು ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಜನರ ಹಕ್ಕುಗಳ ರಕ್ಷಣೆ ಹಾಗೂ ಅವರ ಮೇಲಿನ ದೌರ್ಜನ್ಯ ತಡೆಗೆ ಪೊಲೀಸ್ ಇಲಾಖೆ ಬದ್ಧವಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು, ಸಮಾಜದ ಮುಖಂಡರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.