ಭೂ ಗ್ಯಾರಂಟಿ ಯೋಜನೆಯಡಿ ಕಾಯಂ ಹಕ್ಕು ಪತ್ರ ವಿತರಣೆ
ಬೆಂಗಳೂರು, 24 ಮೇ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 6ನೇ ಗ್ಯಾರಂಟಿ ಯೋಜನೆಯಾದ ‘ಭೂ ಗ್ಯಾರಂಟಿ’ ಯೋಜನೆಯಡಿ ಗಾಂಧಿನಗರ ವಿಧಾನ ಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಅವರು “ಕಾಯಂ ಹಕ್ಕು” ಖಾತಾ ಹಕ್ಕು ಪತ್ರಗಳನ್ನು ವಿತರಿಸಿದರು. ಗಾಂಧಿನಗರ ಕ್ಷೇತ್ರ
ವಿತರಣೆ


ಬೆಂಗಳೂರು, 24 ಮೇ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 6ನೇ ಗ್ಯಾರಂಟಿ ಯೋಜನೆಯಾದ ‘ಭೂ ಗ್ಯಾರಂಟಿ’ ಯೋಜನೆಯಡಿ ಗಾಂಧಿನಗರ ವಿಧಾನ ಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಅವರು “ಕಾಯಂ ಹಕ್ಕು” ಖಾತಾ ಹಕ್ಕು ಪತ್ರಗಳನ್ನು ವಿತರಿಸಿದರು.

ಗಾಂಧಿನಗರ ಕ್ಷೇತ್ರದ ಶಿರೂರು ಪಾರ್ಕ್ ರಸ್ತೆಯಲ್ಲಿರುವ ಆರ್. ಗುಂಡೂರಾವ್ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, “ಬಿ ಖಾತೆಯಿಂದ ಎ ಖಾತೆಗೆ ಪರಿವರ್ತನೆ ಮಾಡಿಕೊಳ್ಳುವುದು ಅನೇಕ ಜನರ ಬಹುಕಾಲದ ಕನಸಾಗಿತ್ತು. ನಮ್ಮ ಸರ್ಕಾರದ ಭೂ ಗ್ಯಾರಂಟಿ ಯೋಜನೆಯ ಮೂಲಕ ಆ ಕನಸನ್ನು ನನಸು ಮಾಡಲಾಗಿದೆ” ಎಂದು ಹೇಳಿದರು.

ರಾಜ್ಯದ ಜನರ ಒಳಿತಿಗಾಗಿ ಸರ್ಕಾರ ಹಲವು ಜನಪರ ಹಾಗೂ ವಿನೂತನ ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಮುಂದಿನ ದಿನಗಳಲ್ಲಿಯೂ ಜನಪರ ಕಾರ್ಯಕ್ರಮಗಳು ನಿರಂತರವಾಗಿ ಮುಂದುವರಿಯಲಿವೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಫಲಾನುಭವಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande