ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್
ಯಡಿಯೂರಪ್ಪ ನಿವಾಸದಲ್ಲಿ ಉಪಹಾರ ಕೂಟ
Naveen


Nitin naveen


Nitin naveen


ಬೆಂಗಳೂರು, 24 ಮೇ (ಹಿ.ಸ.) :

ಆ್ಯಂಕರ್ : ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ನಿತಿನ್ ನಬಿನ್ ಅವರಿಗೆ ರಾಜ್ಯ ಬಿಜೆಪಿ ನಾಯಕರಿಂದ ಭವ್ಯ ಸ್ವಾಗತ ದೊರೆಯಿತು. ಶನಿವಾರ ತಡ ರಾತ್ರಿ ಬೆಂಗಳೂರಿಗೆ ಆಗಮಿಸಿದ ನಿತಿನ್ ನಬಿನ್ ಅವರಿಗೆ ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಾಗತ ಕೋರಿದರು.

ಇಂದು ಬೆಳ್ಳಿಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಹ್ವಾನದ ಮೇರೆಗೆ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಉಪಹಾರ ಕೂಟದಲ್ಲಿ ಭಾಗವಹಿಸಿದರು.

ಪಕ್ಷದ ಸಂಘಟನೆ ಬಲವರ್ಧನೆ ಹಾಗೂ ಮುಂದಿನ ರಾಜಕೀಯ ಚಟುವಟಿಕೆಗಳ ಕುರಿತು ಅನೌಪಚಾರಿಕ ಚರ್ಚೆಯೂ ನಡೆದಿರುವುದಾಗಿ ತಿಳಿದುಬಂದಿದೆ.

ಇದಕ್ಕೂ ಮುನ್ನ ನಿತಿನ್ ನಬಿನ್ ಅವರು ನಗರದ ಕಾಡುಮಲ್ಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಇಂದು ನಗರದಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಿತಿನ್ ನಬಿನ್ ನೇತೃತ್ವದಲ್ಲಿ ಸರಣಿ ಸಭೆಗಳು ನಡೆಯಲಿವೆ. ರಾಜ್ಯದ ಹಾಲಿ ಹಾಗೂ ಮಾಜಿ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ವಿವಿಧ ಪದಾಧಿಕಾರಿಗಳೊಂದಿಗೆ ಅವರು ಪ್ರತ್ಯೇಕ ಸಭೆ ನಡೆಸಲಿದ್ದಾರೆ.

ಸಂಜೆ ನಡೆಯಲಿರುವ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಪಕ್ಷ ಸಂಘಟನೆ ಬಲವರ್ಧನೆ, ಮುಂಬರುವ ಚುನಾವಣಾ ಸಿದ್ಧತೆಗಳು ಹಾಗೂ ಕಾರ್ಯಕರ್ತರ ಸಮನ್ವಯ ಕುರಿತು ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ರಾಜ್ಯ ಭೇಟಿ ಕುರಿತು ಎಕ್ಸನಲ್ಲಿ ಮಾಹಿತಿ ಹಂಚಿಕೊಂಡಿರುವ ನಿತಿನ್ ನಬಿನ್, ಕರ್ನಾಟಕದಲ್ಲಿ ಪಕ್ಷವನ್ನು ವಿಸ್ತರಿಸಿ, ಬಲಪಡಿಸುವಲ್ಲಿ ಯಡಿಯೂರಪ್ಪ ಅವರು ಅಮೂಲ್ಯವಾದ ಪಾತ್ರವನ್ನು ನಿರ್ವಹಿಸಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಅವರು ಸಲ್ಲಿಸಿರುವ 50 ವರ್ಷಗಳ ಸುದೀರ್ಘ ಸೇವೆ ಹಾಗೂ ಜನಕಲ್ಯಾಣದ ಬಗೆಗಿನ ಅವರ ಅಚಲ ಬದ್ಧತೆಯನ್ನು ಸ್ಮರಿಸಿ, ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿ ಶುಭ ಕೋರಿರುವುದಾಗಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande