ರಾಷ್ಟ್ರಪ್ರೇಮ, ಸಂಘಟನೆ ಶಕ್ತಿ ಮತ್ತು ಜನಸೇವೆ ಧ್ಯೇಯವಾಗಲಿ : ಶಶಿಕಲಾ ಜೊಲ್ಲೆ
ನಿಪ್ಪಾಣಿ, 24 ಮೇ (ಹಿ.ಸ.) : ಆ್ಯಂಕರ್ : ನಿಪ್ಪಾಣಿ ಮಂಡಲದ ಮಹಿಳಾ ಕಾರ್ಯಕರ್ತರಿಗಾಗಿ ಆಯೋಜಿಸಲಾಗಿದ್ದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ-2026 ಕಾರ್ಯಕ್ರಮಕ್ಕೆ ಶಾಸಕಿ ಶಶಿಕಲಾ ಜೊಲ್ಲೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರಪ್ರೇಮ, ಸಂಘಟನೆ ಶಕ್ತಿ ಹ
Program


ನಿಪ್ಪಾಣಿ, 24 ಮೇ (ಹಿ.ಸ.) :

ಆ್ಯಂಕರ್ : ನಿಪ್ಪಾಣಿ ಮಂಡಲದ ಮಹಿಳಾ ಕಾರ್ಯಕರ್ತರಿಗಾಗಿ ಆಯೋಜಿಸಲಾಗಿದ್ದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ-2026 ಕಾರ್ಯಕ್ರಮಕ್ಕೆ ಶಾಸಕಿ ಶಶಿಕಲಾ ಜೊಲ್ಲೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರಪ್ರೇಮ, ಸಂಘಟನೆ ಶಕ್ತಿ ಹಾಗೂ ಜನಸೇವೆ ಪ್ರತಿಯೊಬ್ಬ ಕಾರ್ಯಕರ್ತರ ಧ್ಯೇಯವಾಗಬೇಕು ಎಂದು ತಿಳಿಸಿದರು. ಪಕ್ಷದ ತತ್ವ ಹಾಗೂ ವಿಚಾರಧಾರೆಯನ್ನು ಜನರಿಗೆ ತಲುಪಿಸುವಲ್ಲಿ ಮಹಿಳಾ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಹಾರಾಷ್ಟ್ರ ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸೌಮಿಕಾ ಮಹಾದಿಕ್, ಮಹಿಳೆಯರು ಸಮರ್ಪಣಾ ಮನೋಭಾವದಿಂದ ಸಂಘಟನಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಬಿಜೆಪಿ ಪಕ್ಷ ಮಹಿಳೆಯರಿಗೆ ಹೆಚ್ಚಿನ ಗೌರವ ಹಾಗೂ ರಾಜಕೀಯ ಅವಕಾಶಗಳನ್ನು ನೀಡುತ್ತಿದೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande