
ಬಾಗಲಕೋಟೆ, 24 ಮೇ (ಹಿ.ಸ.) :
ಆ್ಯಂಕರ್ : ಬಕ್ರೀದ್ ಹಬ್ಬದ ಅಂಗವಾಗಿ ಬಾಗಲಕೋಟೆ ಜಿಲ್ಲೆಯ ಬಸವನ ಬಾಗೇವಾಡಿ ಪೊಲೀಸ್ ಠಾಣಾ ಆವರಣದಲ್ಲಿ ಭಾನುವಾರ ಶಾಂತಿ ಸಭೆಯನ್ನು ಆಯೋಜಿಸಲಾಯಿತು.
ಬಸವನ ಬಾಗೇವಾಡಿ ಉಪವಿಭಾಗದ ಡಿವೈಎಸ್ಪಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಮುಖಂಡರನ್ನು ಆಹ್ವಾನಿಸಿ ಹಬ್ಬವನ್ನು ಶಾಂತಿಯುತ ಹಾಗೂ ಸೌಹಾರ್ದಯುತವಾಗಿ ಆಚರಿಸುವಂತೆ ಮನವಿ ಮಾಡಲಾಯಿತು.
ಸಭೆಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಹಾಗೂ ಸಾಮಾಜಿಕ ಸೌಹಾರ್ದ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಹಕಾರ ನೀಡುವಂತೆ ಅಧಿಕಾರಿಗಳು ಸಮುದಾಯದ ಮುಖಂಡರಿಗೆ ತಿಳಿಸಿದರು.
ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡದೆ, ಪರಸ್ಪರ ಸಹಕಾರ ಮತ್ತು ಸಹೋದರತ್ವದ ಮನೋಭಾವದಿಂದ ಹಬ್ಬ ಆಚರಿಸಬೇಕು ಎಂದು ಸಲಹೆ ನೀಡಲಾಯಿತು.
ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು, ವಿವಿಧ ಸಮುದಾಯಗಳ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.