ಬಕ್ರೀದ್ ಹಬ್ಬ ಹಿನ್ನೆಲೆ ನರೇಗಲ್ ಠಾಣೆಯಲ್ಲಿ ಶಾಂತಿ ಸಭೆ
ಗದಗ, 24 ಮೇ (ಹಿ.ಸ.) : ಆ್ಯಂಕರ್ : ಬಕ್ರೀದ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಪರಸ್ಪರ ಸಹಕಾರದಿಂದ ಆಚರಿಸುವ ನಿಟ್ಟಿನಲ್ಲಿ ಗದಗ ಜಿಲ್ಲೆಯ ನರೇಗಲ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಿಪಿಐ ವಿಜಯಕುಮಾರ ವಹಿಸಿದ್ದರು. ವಿವಿಧ ಧರ್ಮಗಳ ಮುಖಂಡರು, ಗಣ್ಯರು
ಫೋಟೋ


ಗದಗ, 24 ಮೇ (ಹಿ.ಸ.) :

ಆ್ಯಂಕರ್ : ಬಕ್ರೀದ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಪರಸ್ಪರ ಸಹಕಾರದಿಂದ ಆಚರಿಸುವ ನಿಟ್ಟಿನಲ್ಲಿ ಗದಗ ಜಿಲ್ಲೆಯ ನರೇಗಲ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಸಿಪಿಐ ವಿಜಯಕುಮಾರ ವಹಿಸಿದ್ದರು. ವಿವಿಧ ಧರ್ಮಗಳ ಮುಖಂಡರು, ಗಣ್ಯರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ಸಮಾಜದಲ್ಲಿ ಭಾವೈಕ್ಯತೆ ಹಾಗೂ ಸಹಬಾಳ್ವೆಯ ಸಂದೇಶ ಸಾರಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಎ.ಎ. ನವಲಗುಂದ ಅವರು, ನರೇಗಲ್ ಪಟ್ಟಣವು ಹಿಂದೂ-ಮುಸ್ಲಿಂ ಸಮುದಾಯಗಳ ಪರಸ್ಪರ ಸ್ನೇಹ, ವಿಶ್ವಾಸ ಹಾಗೂ ಐಕ್ಯತೆಯ ಸಂಕೇತವಾಗಿದ್ದು, ಎಲ್ಲಾ ಧರ್ಮಗಳ ಹಬ್ಬಗಳನ್ನು ಜನರು ಒಗ್ಗಟ್ಟಿನಿಂದ ಆಚರಿಸುತ್ತಿರುವುದು ವಿಶೇಷತೆಯಾಗಿದೆ ಎಂದು ಹೇಳಿದರು.

ನಿವೃತ್ತ ಶಿಕ್ಷಕ ಎಂ.ಎಸ್. ಧಡೇಸೂರಮಠ ಮಾತನಾಡಿ, ಹಬ್ಬಗಳು ಮನುಷ್ಯನ ಬದುಕಿನಲ್ಲಿ ಸಂತೋಷ, ನೆಮ್ಮದಿ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವ ಸಂದರ್ಭಗಳಾಗಿವೆ ಎಂದರು.

“ನರೇಗಲ್ ಪಟ್ಟಣವು ಸದಾ ಸ್ನೇಹ, ಸೌಹಾರ್ದತೆ ಮತ್ತು ಸಹಬಾಳ್ವೆಯ ಮೂಲಕ ಹಬ್ಬಗಳನ್ನು ಆಚರಿಸುತ್ತ ಬಂದಿದೆ. ಎಲ್ಲ ಧರ್ಮಗಳ ಮೂಲ ಸಂದೇಶ ಶಾಂತಿಯೇ ಆಗಿದ್ದು, ನಾವೆಲ್ಲರೂ ಒಂದೇ ಎಂಬ ಮನೋಭಾವದಿಂದ ಬದುಕುವುದು ಸಮಾಜದ ಶ್ರೇಯಸ್ಸಿಗೆ ಅಗತ್ಯ” ಎಂದು ಹೇಳಿದರು.

ಪಿಎಸ್ಐ ಐಶ್ವರ್ಯ ನಾಗರಾಳ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿಗಳು ಹಾಗೂ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಮನವಿ ಮಾಡಿದರು.

“ಯಾವುದೇ ಮಾಹಿತಿ ಅಥವಾ ಸುದ್ದಿ ಬಂದರೂ ಅದರ ಸತ್ಯಾಸತ್ಯತೆ ಪರಿಶೀಲಿಸದೇ ನಂಬಬಾರದು. ಸಮಾಜದಲ್ಲಿ ಜಾಗೃತಿ ಮೂಡಿಸುವುದು ಹಾಗೂ ಶಾಂತಿಯುತ ವಾತಾವರಣ ನಿರ್ಮಿಸುವ ಉದ್ದೇಶದಿಂದಲೇ ಇಂತಹ ಶಾಂತಿ ಸಭೆಗಳನ್ನು ಆಯೋಜಿಸಲಾಗುತ್ತಿದೆ” ಎಂದು ತಿಳಿಸಿದರು.

ಸಿಪಿಐ ವಿಜಯಕುಮಾರ ಮಾತನಾಡಿ, ನರೇಗಲ್ ಪಟ್ಟಣವು ಶಾಂತಿ, ಸೌಹಾರ್ದತೆ ಮತ್ತು ಭಾವೈಕ್ಯತೆಯ ಮೂಲಕ ಜಿಲ್ಲೆಗೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಬಕ್ರೀದ್ ಹಬ್ಬವನ್ನು ಎಲ್ಲರೂ ಪರಸ್ಪರ ಸಹಕಾರ ಹಾಗೂ ಶಾಂತಿಯುತ ವಾತಾವರಣದಲ್ಲಿ ಆಚರಿಸಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಎಂ.ಐ. ಹೊಸಮನಿ, ಎಫ್.ಬಿ. ರೇವಡಿಗಾರ, ಎನ್.ಎಚ್. ಕುದರಿ, ಎ.ಎಫ್. ಕೊಪ್ಪದ, ಅಲ್ಲಾಬಕ್ಷಿ ನದಾಫ್, ಎಂ.ಆರ್. ನದಾಫ್, ಎಚ್.ಡಿ. ರಾಹುತ, ಡಿ.ಎಂ. ಹವಾಲ್ದಾರ, ಖಾದರಬಾಷಾ ಹೂಲಗೇರಿ, ಹನುಮಂತಪ್ಪ ದ್ವಾಸಲ್, ಶೇಖರಪ್ಪ ಕೆಂಗಾರ, ಯಮನೂರಪ್ಪ ದ್ವಾಸಲ್, ಎಸ್.ಜೆ. ಮೆಣಸಿಗಿ, ವೈ.ಎಸ್. ನವಲಗುಂದ, ಎಸ್.ಇ. ಮಡಿವಾಳರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande