ಕನ್ನಡ ಜಾಗೃತಿ ವೇದಿಕೆ ರಾಜ್ಯ ಕಾರ್ಯದರ್ಶಿಯಾಗಿ ಪ್ರಭುರಾಜಗೌಡ ಪಾಟೀಲ ನೇಮಕ
ಗದಗ, 24 ಮೇ (ಹಿ.ಸ.) : ಆ್ಯಂಕರ್ : ಕನ್ನಡ ನಾಡು-ನುಡಿ, ರೈತಪರ ಹೋರಾಟ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಗದಗ ಜಿಲ್ಲೆಯ ಯುವ ಮುಖಂಡ ಪ್ರಭುರಾಜಗೌಡ ವಿ. ಪಾಟೀಲ ಅವರಿಗೆ ಮಹತ್ವದ ಜವಾಬ್ದಾರಿ ಒಲಿದಿದೆ. ಕನ್ನಡ ಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿಯಾಗಿ ಅವರನ್ನು ನೇಮ
ಫೋಟೋ


ಗದಗ, 24 ಮೇ (ಹಿ.ಸ.) :

ಆ್ಯಂಕರ್ : ಕನ್ನಡ ನಾಡು-ನುಡಿ, ರೈತಪರ ಹೋರಾಟ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಗದಗ ಜಿಲ್ಲೆಯ ಯುವ ಮುಖಂಡ ಪ್ರಭುರಾಜಗೌಡ ವಿ. ಪಾಟೀಲ ಅವರಿಗೆ ಮಹತ್ವದ ಜವಾಬ್ದಾರಿ ಒಲಿದಿದೆ. ಕನ್ನಡ ಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿಯಾಗಿ ಅವರನ್ನು ನೇಮಕ ಮಾಡಲಾಗಿದ್ದು, ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟದಲ್ಲಿ ಕನ್ನಡ ಜಾಗೃತಿ ವೇದಿಕೆ ವತಿಯಿಂದ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳ ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗಿತ್ತು. ಈ ಕಾರ್ಯಾಗಾರದಲ್ಲಿ ಗದಗ ಜಿಲ್ಲೆಯ ಯುವ ಮುಖಂಡ ಪ್ರಭುರಾಜಗೌಡ ವಿ. ಪಾಟೀಲ ಅವರನ್ನು ಕನ್ನಡ ಜಾಗೃತಿ ವೇದಿಕೆಯ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಕೆ. ಮಂಜುನಾಥ ದೇವ ಅವರು ನೇಮಕಾತಿ ಆದೇಶ ನೀಡಿ ಮಾತನಾಡಿದರು. ಕಳೆದ ಎರಡು ದಶಕಗಳಿಂದ ಪ್ರಭುರಾಜಗೌಡ ಪಾಟೀಲ ಅವರು ಕನ್ನಡ ನಾಡು-ನುಡಿ ಉಳಿವಿನ ಹೋರಾಟ, ರೈತಪರ ಚಳುವಳಿಗಳು ಹಾಗೂ ವಿವಿಧ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದನ್ನು ಗಮನಿಸಿ ಅವರಿಗೆ ರಾಜ್ಯ ಕಾರ್ಯದರ್ಶಿ ಹುದ್ದೆಯ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಮಾತನಾಡಿದ ಮುಖಂಡರು, ಸಂಘಟನೆ ಮತ್ತಷ್ಟು ಬಲವರ್ಧನೆಗೊಳ್ಳಬೇಕಾದರೆ ಯುವ ನಾಯಕತ್ವಕ್ಕೆ ಹೆಚ್ಚಿನ ಅವಕಾಶ ಕಲ್ಪಿಸುವುದು ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ಪ್ರಭುರಾಜಗೌಡ ಪಾಟೀಲ ಅವರ ನೇಮಕಾತಿ ಸಂಘಟನೆಗೆ ಹೊಸ ಚೈತನ್ಯ ನೀಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಾಗಾರದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿ, ಕನ್ನಡ ಮುನ್ನಡೆ, ಕಾನೂನು ಅರಿವು, ಸಂಘಟನೆಯ ಉದ್ದೇಶಗಳು ಹಾಗೂ ವಿವಿಧ ಹಂತದ ಪದಾಧಿಕಾರಿಗಳ ಜವಾಬ್ದಾರಿಗಳ ಕುರಿತು ಸವಿಸ್ತಾರ ಚರ್ಚೆ ನಡೆಯಿತು. ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ತಾಲೂಕುಗಳಿಂದ ಆಗಮಿಸಿದ್ದ ಪದಾಧಿಕಾರಿಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡು ಸಂಘಟನೆಯ ಮುಂದಿನ ಕಾರ್ಯಕ್ರಮಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಘಟಕಗಳ ಅಧ್ಯಕ್ಷರು, ಮಹಿಳಾ ಮುಖಂಡರು, ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande