
ಬೆಂಗಳೂರು, 24 ಮೇ (ಹಿ.ಸ.) :
ಆ್ಯಂಕರ್ : ರಾಜ್ಯದ ನಾನಾ ಭಾಗಗಳಲ್ಲಿ ಇಂದು ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಾದ್ಯಂತ ಹಲವೆಡೆ ಗುಡುಗು, ಸಿಡಿಲು ಹಾಗೂ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕೆಲ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.
ಗುಡುಗು-ಸಿಡಿಲಿನ ಸಮಯದಲ್ಲಿ ತೆರವಾದ ಪ್ರದೇಶಗಳಲ್ಲಿ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಮನವಿ ಮಾಡಲಾಗಿದೆ.
ಭಾರೀ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ರೈತರು, ಮೀನುಗಾರರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.