ಡೀಸೆಲ್ ಗಾಗಿ ಮುಗಿಬಿದ್ದ ರೈತರು ; ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
ಉಂಟಾಗಿದೆ
ಫೋಟೋ


ಗದಗ, 24 ಮೇ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಅಭಾವ ತಲೆದೋರಿದ ಹಿನ್ನೆಲೆ ಜನರು ಮತ್ತು ರೈತರು ಬಂಕ್ಗಳತ್ತ ಮುಗಿಬಿದ್ದ ಘಟನೆ ನಡೆದಿದೆ. ಉತ್ತಮ ಮಳೆಯಾಗಿರುವುದರಿಂದ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳು ವೇಗ ಪಡೆದುಕೊಂಡಿದ್ದು, ಇದೇ ವೇಳೆ ಡೀಸೆಲ್ ಕೊರತೆ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಲಕ್ಷ್ಮೇಶ್ವರ ಪಟ್ಟಣದ ಹಲವು ಪೆಟ್ರೋಲ್ ಬಂಕ್ಗಳಲ್ಲಿ ಡೀಸೆಲ್ ಖಾಲಿಯಾಗಿರುವ ಮಾಹಿತಿ ಹರಡುತ್ತಿದ್ದಂತೆ ರೈತರು ಟ್ರ್ಯಾಕ್ಟರ್ಗಳು ಹಾಗೂ ಕ್ಯಾನ್ಗಳೊಂದಿಗೆ ಬಂಕ್ಗಳ ಮುಂದೆ ದೀರ್ಘ ಸಾಲಿನಲ್ಲಿ ನಿಂತು ಇಂಧನಕ್ಕಾಗಿ ಕಾಯುತ್ತಿರುವ ದೃಶ್ಯ ಕಂಡುಬಂತು. ಪಟ್ಟಣದ ಮಂಜರಾಪುರ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ನಲ್ಲಿ ಡೀಸೆಲ್ ಪಡೆಯಲು ರೈತರು ಹಾಗೂ ಸಾರ್ವಜನಿಕರು ಏಕಾಏಕಿ ಮುಗಿಬಿದ್ದ ಪರಿಣಾಮ ಕೆಲಕಾಲ ಗೊಂದಲದ ವಾತಾವರಣ ಉಂಟಾಗಿಯಿತು.

ಮುಂಗಾರು ಮಳೆಯೊಂದಿಗೆ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ಬಿತ್ತನೆ, ಉಳುಮೆ ಸೇರಿದಂತೆ ವಿವಿಧ ಕೃಷಿ ಕಾರ್ಯಗಳಿಗೆ ರೈತರು ಟ್ರ್ಯಾಕ್ಟರ್ ಹಾಗೂ ಕೃಷಿ ಯಂತ್ರೋಪಕರಣಗಳನ್ನು ಅವಲಂಬಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಡೀಸೆಲ್ ಕೊರತೆ ಉಂಟಾಗಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಸಮಯಕ್ಕೆ ಸರಿಯಾಗಿ ಡೀಸೆಲ್ ದೊರೆಯದಿದ್ದರೆ ಕೃಷಿ ಕಾರ್ಯಗಳಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್ ಹಾಗೂ ಡೀಸೆಲ್ ಪಡೆಯಲು ಜನರು ಒಮ್ಮೆಲೆ ಬಂಕ್ಗೆ ಆಗಮಿಸಿದ ಹಿನ್ನೆಲೆ ಪರಿಸ್ಥಿತಿ ನಿಯಂತ್ರಣ ಮೀರುವ ಹಂತ ತಲುಪಿತ್ತು. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಜನರನ್ನು ನಿಯಂತ್ರಿಸಲು ಹರಸಾಹಸ ಪಟ್ಟು ಪರಿಸ್ಥಿತಿಯನ್ನು ಸಮತೋಲನಗೊಳಿಸಿದರು.

ಡೀಸೆಲ್ ಅಭಾವದಿಂದ ರೈತರು ಪರದಾಡುವಂತಾಗಿದ್ದು, ಸಂಬಂಧಪಟ್ಟ ಇಲಾಖೆ ಹಾಗೂ ತೈಲ ಕಂಪನಿಗಳು ತಕ್ಷಣ ಅಗತ್ಯ ಪ್ರಮಾಣದ ಇಂಧನ ಪೂರೈಕೆ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಕೃಷಿ ಚಟುವಟಿಕೆಗಳು ಗರಿಗೆದರಿರುವ ಹೊತ್ತಿನಲ್ಲಿ ಇಂಧನ ಕೊರತೆ ಮುಂದುವರಿದರೆ ರೈತರಿಗೆ ಮತ್ತಷ್ಟು ತೊಂದರೆ ಎದುರಾಗುವ ಸಾಧ್ಯತೆ ಇದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande