
ಚಿಂತಾಮಣಿ, 24 ಮೇ (ಹಿ.ಸ.) :
ಆ್ಯಂಕರ್ : ಚಿಂತಾಮಣಿಯ ರಾಮಕುಂಟೆಯಲ್ಲಿ ನಿರ್ಮಾಣವಾಗುತ್ತಿರುವ ಖಾಸಗಿ ಬಸ್ ಟರ್ಮಿನಲ್ ಹಾಗೂ ವಾಹನ ದುರಸ್ತಿ ಕೇಂದ್ರದ ಬೃಹತ್ ಕಾಮಗಾರಿಯನ್ನು ಸಚಿವ ಎಂ.ಸಿ.ಸುಧಾಕರ ಪರಿಶೀಲಿಸಿದರು.
ಪ್ರಗತಿಯಲ್ಲಿರುವ ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿದ ಸಚಿವರು, ನಿರ್ಮಾಣದ ವಿನ್ಯಾಸ, ಮೂಲಸೌಕರ್ಯ ಹಾಗೂ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಯೋಜನೆಯ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದ ಸಚಿವರು, ಬಸ್ ಟರ್ಮಿನಲ್ ಹಾಗೂ ವಾಹನ ದುರಸ್ತಿ ಕೇಂದ್ರದಿಂದ ಪ್ರದೇಶದ ಸಂಚಾರ ವ್ಯವಸ್ಥೆ, ಸಾರ್ವಜನಿಕ ಸೌಲಭ್ಯ ಮತ್ತು ವ್ಯಾಪಾರ ಚಟುವಟಿಕೆಗಳಿಗೆ ಆಗುವ ಅನುಕೂಲಗಳ ಕುರಿತು ಮಾಹಿತಿ ನೀಡಿದರು.
ರಾಮಕುಂಟೆ ಪ್ರದೇಶದಲ್ಲಿ ವೇಗವಾಗಿ ಸಾಗುತ್ತಿರುವ ಈ ಯೋಜನೆ ಪೂರ್ಣಗೊಂಡ ಬಳಿಕ ಚಿಂತಾಮಣಿಗೆ ಸಮಗ್ರ ಸಾರಿಗೆ ಹಾಗೂ ವಾಹನ ನಿರ್ವಹಣಾ ಕೇಂದ್ರವಾಗಿ ರೂಪುಗೊಳ್ಳಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.