ಯಲಬುರ್ಗಾ, ಕುಕನೂರು ತಾಲೂಕಿನ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕೊಪ್ಪಳ, 25 ಮೇ (ಹಿ.ಸ.) : ಆ್ಯಂಕರ್ : ಸಮಜ ಕಲ್ಯಾಣ ಇಲಾಖೆಯಿಂದ ಯಲಬುರ್ಗಾ ಹಾಗೂ ಕುಕನೂರು ತಾಲೂಕಿನ 2026-27ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯಲಬುರ್ಗಾ ಮತ್ತು ಕುಕನೂರು ತಾಲೂಕುಗಳಿಗೆ ಸಂಬಂಧಿಸಿದಂತೆ ಹಿರೇಹರಳಿಹಳ್ಳಿ, ಗಾಣದ
ಯಲಬುರ್ಗಾ, ಕುಕನೂರು ತಾಲೂಕಿನ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ


ಕೊಪ್ಪಳ, 25 ಮೇ (ಹಿ.ಸ.) :

ಆ್ಯಂಕರ್ : ಸಮಜ ಕಲ್ಯಾಣ ಇಲಾಖೆಯಿಂದ ಯಲಬುರ್ಗಾ ಹಾಗೂ ಕುಕನೂರು ತಾಲೂಕಿನ 2026-27ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಯಲಬುರ್ಗಾ ಮತ್ತು ಕುಕನೂರು ತಾಲೂಕುಗಳಿಗೆ ಸಂಬಂಧಿಸಿದಂತೆ ಹಿರೇಹರಳಿಹಳ್ಳಿ, ಗಾಣದಾಳ, ಚಿಕ್ಕಮ್ಯಗೇರಿ, ಹಿರೇವಂಕಲಕುಂಟಾ, ಯಲಬುರ್ಗಾ, ಬೇವೂರು, ಕುಕನೂರು, ಸೋಂಪುರ, ರಾಜೂರು, ಮಂಗಳೂರಿನಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಸರಕಾರಿ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳಿಗೆ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕ ಹಾಗೂ ಬಾಲಕಿಯರ ವಸತಿ ನಿಲಯಗಳಲ್ಲಿ ಪ್ರಸಕ್ತ ಸಾಲಿನ ಪ್ರವೇಶ ಪ್ರಾರಂಭಿವಾಗಿದ್ದು, ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಎಸ್.ಎ.ಟಿ.ಎಸ್ ಐಡಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಆರ್.ಡಿ ಸಂಖ್ಯೆ), ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆಯೊಂದಿಗೆ ಆನ್ಲೈನ್ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಆನ್ಲೈನ್ ಅರ್ಜಿಯ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪ್ರತದ ದೃಢೀಕೃತ ಝೆರಾಕ್ಸ್ ಪ್ರತಿ, ಹಿಂದಿನ ತರಗತಿಯ ಅಂಕಪಟ್ಟಿಯ ದೃಢೀಕೃತ ಝೆರಾಕ್ಸ್ ಪ್ರತಿ, ವಿದ್ಯಾರ್ಥಿ ಮತ್ತು ಪೆÇೀಷಕರ ಆಧಾರ್ ಕಾರ್ಡ್ ಝೆರಾಕ್ಸ್ ಪ್ರತಿ ಹಾಗೂ ವಿದ್ಯಾರ್ಥಿಯ ಪಾಸ್ ಪೆÇೀರ್ಟ್ ಸೈಜ್ 2 ಫೆÇೀಟೋಗಳೊಂದಿಗೆ ಅಗತ್ಯ ದಾಖಲೆಗಳನ್ನು ಆಯಾ ವಸತಿ ನಿಲಯಗಳಲ್ಲಿ ಅಥವಾ ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಯಲಬುರ್ಗಾ ರವರ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಯಲಬುರ್ಗಾ ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-2 ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande