
ಕೊಪ್ಪಳ, 25 ಮೇ (ಹಿ.ಸ.) :
ಆ್ಯಂಕರ್ : ಜಿಲ್ಲೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ), ಕುಷ್ಟಗಿ ರಸ್ತೆ, ಟಣಕನಕಲ್, ಕೊಪ್ಪಳದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಅಪ್ರೆಂಟಿಸ್ಶಿಪ್ ತರಬೇತಿ ಸಂದರ್ಶನ ಪ್ರಕ್ರಿಯೆ ಯಶಸ್ವಿಯಾಗಿ ನಡೆದಿದ್ದು, 323 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.
ಬೆಂಗಳೂರು ಸಮೀಪದ ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಆಯೋಜಿಸಲಾದ ಈ ಸಂದರ್ಶನದಲ್ಲಿ ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳು ಹಾಗೂ ಪ್ರಸ್ತುತ ಅಂತಿಮ ವರ್ಷದ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಭಾಗವಹಿಸುವ ಅವಕಾಶ ಕಲ್ಪಿಸಲಾಗಿತ್ತು.
ಕೊಪ್ಪಳ ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಂದ ಒಟ್ಟು 509 ತರಬೇತಿದಾರರು ಹೆಸರು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 370 ಅಭ್ಯರ್ಥಿಗಳು ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಿದ್ದು, ಉತ್ತಮ ಪ್ರದರ್ಶನ ತೋರಿದ 323 ಅಭ್ಯರ್ಥಿಗಳು ಅಂತಿಮವಾಗಿ ಆಯ್ಕೆ ಮಾಡಲಾಯಿತು.
ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ ದೃಷ್ಟಿಯಿಂದ ಈ ಸಂದರ್ಶನ ಪ್ರಕ್ರಿಯೆ ಐಟಿಐ ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರಿ ಐಟಿಐ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಜಿಲ್ಲಾ ನೋಡಲ್ ಅಧಿಕಾರಿಗಳು ಶುಭಾಶಯ ಕೋರಿದರು. ಮುಂದಿನ ದಿನಗಳಲ್ಲೂ ಐಟಿಐ ತರಬೇತಿದಾರರು ಇಂತಹ ಉದ್ಯೋಗಾವಕಾಶಗಳು ಹಾಗೂ ತರಬೇತಿ ಕಾರ್ಯಕ್ರಮಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್