
ಬೆಂಗಳೂರು, 25 ಮೇ (ಹಿ.ಸ.) :
ಆ್ಯಂಕರ್ : ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕಂಪ್ಯೂಟರ್ ಟ್ಯಾಲಿ ತರಬೇತಿ ಕುರಿತು 38 ದಿನಗಳ ಉಚಿತ ತರಬೇತಿಯು ಜೂನ್ 16 ರಿಂದ ಆರಂಭವಾಗಲಿದ್ದು, ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ-ಯುವತಿಯರಿಂದ ಆರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9481506564, 9380162042,9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.