
ಬೆಂಗಳೂರು, 25 ಮೇ (ಹಿ.ಸ.) :
ಆ್ಯಂಕರ್ : ಕರ್ನಾಟಕ ವಿಜ್ಙಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ‘ಉನ್ನತ ಬೌದ್ದಿಕ ಆಸ್ತಿ ಹಕ್ಕುಗಳು’ ವಿಷಯದ ಬಗ್ಗೆ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ಮತ್ತು ತಂತ್ರಜ್ಞಾನಿಗಳಿಂದ ಜೂನ್ 16 ರಿಂದ 20 ರವರೆಗೆ ಐದು ದಿನಗಳ ತರಬೇತಿ ಕಾರ್ಯಗಾರವನ್ನು ಅಕಾಡೆಮಿಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಆಸಕ್ತರು ವಿಜ್ಞಾನ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು/ಪ್ರಾಧ್ಯಾಪಕರು, ವಿಜ್ಞಾನಾಸಕ್ತರು ಹಾಗೂ ಕೈಗಾರಿಕೋದ್ಯಮದ ಪ್ರತಿನಿಧಿಗಳು https:// forms.gle/iwHJD5CxnccCFW4u5 ನಲ್ಲಿ ಜೂನ್ 12 ರೊಳಗಾಗಿ ನೋಂದಾಯಿಸಿಕೊಂಡು ಕಾರ್ಯಗಾರದ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-29721550, 9743084194 ಅಥವಾ ಇ-ಮೇಲ್ ksta.gok@gmai.com , https://kstacademy.in ವೆಬ್ ಸೈಟ್ ಅನ್ನು ಸಂಪರ್ಕಿಸಬಹುದು ಎಂದು ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.