ಇಂಧನ ದರ ಏರಿಕೆ ; ಕೇಂದ್ರದ ವಿರುದ್ದ ಖರ್ಗೆ ಆಕ್ರೋಶ
ನವದೆಹಲಿ, 25 ಮೇ (ಹಿ.ಸ.) : ಆ್ಯಂಕರ್ : ಇಂಧನ ದರ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸಾಮಾನ್ಯ ಜನರ ಮೇಲೆ “ದೈನಂದಿನ ದರ ಏರಿಕೆಯ ಹೊರೆ” ಹೆಚ್ಚುತ್ತಿದೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್
Kharge post


ನವದೆಹಲಿ, 25 ಮೇ (ಹಿ.ಸ.) :

ಆ್ಯಂಕರ್ : ಇಂಧನ ದರ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸಾಮಾನ್ಯ ಜನರ ಮೇಲೆ “ದೈನಂದಿನ ದರ ಏರಿಕೆಯ ಹೊರೆ” ಹೆಚ್ಚುತ್ತಿದೆ ಎಂದು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ ಅವರು, ಕಳೆದ ಕೆಲವು ದಿನಗಳಲ್ಲಿ ಇಂಧನ ದರಗಳು ಮತ್ತೆ ಏರಿಕೆಯಾಗಿದೆ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳು ನಿರಂತರವಾಗಿ ಹೆಚ್ಚುತ್ತಿರುವುದರಿಂದ ಜನಸಾಮಾನ್ಯರ ಕುಟುಂಬ ಬಜೆಟ್ ಮೇಲೆ ನೇರ ಪರಿಣಾಮ ಬೀರುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಅವರು ನೀಡಿರುವ ಅಂಕಿಅಂಶಗಳ ಪ್ರಕಾರ, ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ ಹೆಚ್ಚಳವಾಗಿದೆ ಮತ್ತು ಡೀಸೆಲ್ ದರವೂ ಗಮನಾರ್ಹವಾಗಿ ಏರಿಕೆಯಾಗಿದೆ ಎಂದು ಹೇಳಲಾಗಿದೆ. ಇಂಧನ ದರ ಏರಿಕೆಯಿಂದ ರೈತರು, ಸಾರಿಗೆ ವಲಯ ಮತ್ತು ಸಣ್ಣ ಉದ್ಯಮಗಳು ಹೆಚ್ಚುವರಿ ಹೊರೆ ಹೊರುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ಖರ್ಗೆ ಅವರು ಹಿಂದಿನ ಸರ್ಕಾರಗಳ ಅವಧಿಯ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳ ಬದಲಾವಣೆ ಹಾಗೂ ಇಂದಿನ ದರಗಳ ನಡುವಿನ ಉಲ್ಲೇಖಿಸಿ, ಇಂದಿನ ನೀತಿಗಳ ವಿರುದ್ಧ ಪ್ರಶ್ನೆ ಎತ್ತಿದ್ದಾರೆ. ಜೊತೆಗೆ, ಸಾರ್ವಜನಿಕರ ಮೇಲಿನ ತೆರಿಗೆ ಹಾಗೂ ಇಂಧನ ದರ ನೀತಿಗಳಿಂದ ಸರ್ಕಾರಕ್ಕೆ ದೊಡ್ಡ ಆದಾಯ ಬರುತ್ತಿದೆ ಎಂದು ಅವರು ಹೇಳಿದ್ದಾರೆ.

ಅವರು ಇಂಧನ ಕಂಪನಿಗಳ ಷೇರು ಮೌಲ್ಯ ಏರಿಕೆಯನ್ನು ಉಲ್ಲೇಖಿಸಿ, ಸಾಮಾನ್ಯ ಜನರ ಹೊರೆ ಹೆಚ್ಚಾದಾಗ ಕಂಪನಿಗಳಿಗೆ ಲಾಭವಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇಂಧನ ದರ ಏರಿಕೆ “ದೈನಂದಿನ ಆರ್ಥಿಕ ಹೊಡೆತ” ನೀಡುತ್ತಿದೆ ಎಂದು ಅವರು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande