ಗ್ರಾಮೀಣ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಸರ್ಕಾರ ಬದ್ಧ : ಸಚಿವ ಚಲುವರಾಯಸ್ವಾಮಿ
ಮಂಡ್ಯ, 25 ಮೇ (ಹಿ.ಸ.) : ಆ್ಯಂಕರ್ : ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಗ್ರಾಮೀಣ ಭಾಗದ ವಿದ್ಯಾರ್ಥಿನಿ
Inauguration


ಮಂಡ್ಯ, 25 ಮೇ (ಹಿ.ಸ.) :

ಆ್ಯಂಕರ್ : ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣ ಪಡೆಯಲು ಸೂಕ್ತ ವಾತಾವರಣ ಹಾಗೂ ಮೂಲಸೌಕರ್ಯ ಕಲ್ಪಿಸುವ ದಿಶೆಯಲ್ಲಿ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಮೂಲಾಧಾರವಾಗಿದ್ದು, ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರಿಗೆ ಉತ್ತಮ ವಸತಿ ಸೌಲಭ್ಯ ಒದಗಿಸುವ ಮೂಲಕ ಅವರ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡಲಾಗುತ್ತಿದೆ ಎಂದರು.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯರು ಉನ್ನತ ಶಿಕ್ಷಣಕ್ಕಾಗಿ ನಗರ ಪ್ರದೇಶಗಳಿಗೆ ತೆರಳುವ ಸಂದರ್ಭದಲ್ಲಿ ವಸತಿ ಸಮಸ್ಯೆ ಎದುರಾಗುತ್ತಿದ್ದು, ಈ ನೂತನ ವಿದ್ಯಾರ್ಥಿ ನಿಲಯವು ಅವರಿಗೆ ಸುರಕ್ಷಿತ ಮತ್ತು ಅನುಕೂಲಕರ ವಾತಾವರಣ ಒದಗಿಸಲಿದೆ ಎಂದು ಹೇಳಿದರು.

ವಿದ್ಯಾರ್ಥಿ ನಿಲಯದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳು, ಸುಸಜ್ಜಿತ ಕೊಠಡಿಗಳು, ಶುದ್ಧ ಕುಡಿಯುವ ನೀರು ಹಾಗೂ ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದ್ದು, ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಗೆ ಪೂರಕ ವ್ಯವಸ್ಥೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande