
ಕೊಪ್ಪಳ, 25 ಮೇ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮಾಹಿತಿ ಹಕ್ಕು ಅಧಿನಿಯಮ-2005ರ ನಾಮಫಲಕವನ್ನು ಅಳವಡಿಸುವಂತೆ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ ಭವನದ ವಿವಿಧ ಕಚೇರಿಗಳಲ್ಲಿ ಮಾಹಿತಿ ಹಕ್ಕು ಅಧಿನಿಯಮ-2005ರ ನಾಮಫಲಕವನ್ನು ಅಳವಡಿಸಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ದೂರುಗಳು ಸ್ವೀಕೃತವಾಗಿದ್ದು, ಜಿಲ್ಲಾಡಳಿತ ಭವನದಲ್ಲಿರುವ ಎಲ್ಲಾ ಕಚೇರಿಗಳು ಹಾಗೂ ತಮ್ಮ ಅಧೀನದಲ್ಲಿ ಬರುವ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಕಡ್ಡಾಯವಾಗಿ ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಮಾಹಿತಿಯುಳ್ಳ ನಾಮಫಲಕವನ್ನು ಅಳವಡಿಸುವಂತೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್