ಕುಷ್ಟಗಿ : ಮೀನುಗಾರಿಕೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಕುಷ್ಟಗಿ, 25 ಮೇ (ಹಿ.ಸ.) : ಆ್ಯಂಕರ್ : ಮೀನುಗಾರಿಕೆ ಮತ್ತು ಮೀನು ಸಾಕಣೆ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಮೀನುಗಾರಿಕೆ ಇಲಾಖೆಯು 2026-27ನೇ ಸಾಲಿಗೆ ಕುಷ್ಟಗಿ ತಾಲೂಕಿನ ವ್ಯಾಪ್ತಿಯ ಮೀನುಗಾರರು ಮತ್ತು ಮೀನುಕೃಷಿಕರಿಗೆ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಹಾಗೂ ಕಿಸಾನ್ ಕ್ರೆಡಿಟ್ ಕಾರ್
ಕುಷ್ಟಗಿ : ಮೀನುಗಾರಿಕೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ


ಕುಷ್ಟಗಿ, 25 ಮೇ (ಹಿ.ಸ.) :

ಆ್ಯಂಕರ್ : ಮೀನುಗಾರಿಕೆ ಮತ್ತು ಮೀನು ಸಾಕಣೆ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಮೀನುಗಾರಿಕೆ ಇಲಾಖೆಯು 2026-27ನೇ ಸಾಲಿಗೆ ಕುಷ್ಟಗಿ ತಾಲೂಕಿನ ವ್ಯಾಪ್ತಿಯ ಮೀನುಗಾರರು ಮತ್ತು ಮೀನುಕೃಷಿಕರಿಗೆ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ವಿತರಣೆಗೆ ಅರ್ಜಿ ಆಹ್ವಾನಿಸಿದೆ.

ಆರ್ಥಿಕ ನೆರವು ಪಡೆಯಲು ಇಚ್ಛಿಸುವ ಅರ್ಹ ಫಲಾನುಭವಿಗಳು ಮೇ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು.

ಅರ್ಜಿದಾರರು ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಪ್ರತಿಗಳು, ಮೀನುಗಾರಿಕೆ ಚಟುವಟಿಕೆ ನಡೆಸುತ್ತಿರುವ ಕುರಿತು ಸಂಬಂಧಿತ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಿಡಿಒ ಅವರ ದೃಢೀಕರಣ ಪತ್ರ ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿಯನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಕುಷ್ಟಗಿಯ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು. ಕುಷ್ಟಗಿ ತಾಲೂಕಿನ ಮೀನುಗಾರರು ಮತ್ತು ಮೀನು ಕೃಷಿಕರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಎಂದು ಕುಷ್ಟಗಿ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande