ಮೊರಾರ್ಜಿ ದೇಸಾಯಿ ವಸತಿ ಕಾಲೇಜುಗಳ ದಾಖಲಾತಿ ; ನಾಳೆ ಕೌನ್ಸಿಲಿಂಗ್
ಕೊಪ್ಪಳ, 25 ಮೇ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು, ಮೊರಾರ್ಜಿ ದೇಸಾಯಿ/ ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಕಾಲೇಜು ಹಾಗೂ ಮೌಲಾನಾ ಆಜಾದ್ ಕಾಲೇಜುಗಳಲ್ಲಿ 2026-27ನೇ ಸಾಲಿನ ಪ್ರಥಮ ಪ
ಮೊರಾರ್ಜಿ ದೇಸಾಯಿ ವಸತಿ ಕಾಲೇಜುಗಳ ದಾಖಲಾತಿ ; ನಾಳೆ ಕೌನ್ಸಿಲಿಂಗ್


ಕೊಪ್ಪಳ, 25 ಮೇ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು, ಮೊರಾರ್ಜಿ ದೇಸಾಯಿ/ ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಕಾಲೇಜು ಹಾಗೂ ಮೌಲಾನಾ ಆಜಾದ್ ಕಾಲೇಜುಗಳಲ್ಲಿ 2026-27ನೇ ಸಾಲಿನ ಪ್ರಥಮ ಪಿಯುಸಿ ದಾಖಲಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಾಳೆ ನೇರ ಕೌನ್ಸಿಲಿಂಗ್ ಹಮ್ಮಿಕೊಳ್ಳಲಾಗಿದೆ.

ಕೊಪ್ಪಳ ತಾಲೂಕಿನ ಟಣಕನಕಲ್ನಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಯಲಿದ್ದು, ಈ ವೇಳೆ ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆ ಮಾಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಅಗತ್ಯ ದಾಖಲೆಗಳೊಂದಿಗೆ ಕೌನ್ಸಿಲಿಂಗ್ಗೆ ಹಾಜರಾಗಬೇಕು.

ಕೌನ್ಸಿಲಿಂಗ್ ವೇಳಾಪಟ್ಟಿಯಂತೆ ನಾಳೆ ಬೆಳಗ್ಗೆ 9.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಅಲ್ಪಸಂಖ್ಯಾತರ ಸಮುದಾಯದ ಬಾಲಕಿಯರಿಗೆ, ಮಧ್ಯಾಹ್ನ 12ರಿಂದ ಸಂಜೆ 2 ಗಂಟೆಯವರೆಗೆ ಅಲ್ಪಸಂಖ್ಯಾತರ ಸಮುದಾಯದ ಬಾಲಕರಿಗೆ ಕೌನ್ಸಿಲಿಂಗ್ ನಡೆಯಲಿದೆ. ಅದೇ ರೀತಿ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆಯವರೆಗೆ ಹಿಂದುಳಿದ ವರ್ಗಗಳ ಬಾಲಕಿಯರಿಗೆ ಹಾಗೂ ಸಂಜೆ 4 ರಿಂದ 5 ಗಂಟೆಯವರೆಗೆ ಹಿಂದುಳಿದ ವರ್ಗಗಳ ಬಾಲಕರಿಗೆ ಕೌನ್ಸಿಲಿಂಗ್ ನಡೆಸಲಾಗುತ್ತದೆ.

ದಾಖಲಾತಿ ಹಾಗೂ ಕೌನ್ಸಿಲಿಂಗ್ ಕುರಿತು ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಮತ್ತು ಪಾಲಕರು ತಮ್ಮ ಹತ್ತಿರದ ವಸತಿ ಕಾಲೇಜುಗಳು ಅಥವಾ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ. ಕೊಪ್ಪಳ ಮಾಹಿತಿ ಕೇಂದ್ರ 08539-225070, 8088892549, ಗಂಗಾವತಿ 9972524670, ಕುಷ್ಟಗಿ 8861610578, ಯಲಬುರ್ಗಾ 8095191406 ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande