ಪಶ್ಚಿಮ ಬಂಗಾಳ ಗೂಂಡಾಗಿರಿ ರಾಜಕೀಯಕ್ಕೆ ತಕ್ಕ ಉತ್ತರ-ಪ್ರಧಾನಿ
ನವದೆಹಲಿ, 25 ಮೇ (ಹಿ.ಸ.) : ಆ್ಯಂಕರ್ : ಪಶ್ಚಿಮ ಬಂಗಾಳದ ಫಾಲ್ತಾ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಭರ್ಜರಿ ಗೆಲುವಿನ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಗೆಲುವು ಪ್ರಜಾಪ್ರಭುತ್ವದ ಜಯವಾಗಿದ್ದು, ಬೆದರಿಕೆ ಮತ್ತು ಗೂಂಡಾಗಿರಿಯ
Pm


ನವದೆಹಲಿ, 25 ಮೇ (ಹಿ.ಸ.) :

ಆ್ಯಂಕರ್ : ಪಶ್ಚಿಮ ಬಂಗಾಳದ ಫಾಲ್ತಾ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಭರ್ಜರಿ ಗೆಲುವಿನ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಗೆಲುವು ಪ್ರಜಾಪ್ರಭುತ್ವದ ಜಯವಾಗಿದ್ದು, ಬೆದರಿಕೆ ಮತ್ತು ಗೂಂಡಾಗಿರಿಯ ರಾಜಕೀಯಕ್ಕೆ ಜನರು ತಕ್ಕ ಉತ್ತರ ನೀಡಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ.

ಭಾನುವಾರ ತಡರಾತ್ರಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, “ಫಾಲ್ತಾ ಜನತೆ ತಮ್ಮ ತೀರ್ಪು ನೀಡಿದ್ದಾರೆ. ಇದು ಪ್ರಜಾಪ್ರಭುತ್ವದ ಜಯ ಮತ್ತು ಭಯಭೀತಿಗೊಳಿಸುವ ಶಕ್ತಿಗಳ ಸೋಲು. ದಾಖಲೆ ಅಂತರದಿಂದ ಗೆಲುವು ಸಾಧಿಸಿದ ದೇವಾಂಗ್ಶು ಪಾಂಡಾ ಅವರಿಗೆ ಅಭಿನಂದನೆಗಳು,” ಎಂದು ತಿಳಿಸಿದ್ದಾರೆ.

ಫಾಲ್ತಾ ಕ್ಷೇತ್ರದ ಜನತೆ ಬಿಜೆಪಿ ಮೇಲಿನ ತಮ್ಮ ಆತ್ಮ ವಿಶ್ವಾಸವನ್ನು ಮತ್ತೊಮ್ಮೆ ತೋರಿಸಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಜನಪರ ಕಾರ್ಯಗಳನ್ನು ಜನರು ಗಮನಿಸುತ್ತಿದ್ದು, ಅದಕ್ಕೆ ಪ್ರತಿಫಲವಾಗಿ ಪಕ್ಷಕ್ಕೆ ಹೆಚ್ಚಿನ ಆಶೀರ್ವಾದ ನೀಡಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನೊಂದು ಪೋಸ್ಟ್ನಲ್ಲಿ ಪ್ರಧಾನಿ ಮೋದಿ, “ಪಶ್ಚಿಮ ಬಂಗಾಳದ ಎಲ್ಲಾ ಬಿಜೆಪಿ ಕಾರ್ಯಕರ್ತರಿಗೆ ಅವರ ಅದ್ಭುತ ಪರಿಶ್ರಮಕ್ಕಾಗಿ ಅಭಿನಂದನೆಗಳು. ಮುಂದಿನ ದಿನಗಳಲ್ಲಿಯೂ ರಾಜ್ಯದ ಪ್ರಗತಿಗಾಗಿ ನಾವು ನಿರಂತರವಾಗಿ ಕೆಲಸ ಮಾಡುತ್ತೇವೆ,” ಎಂದು ಹೇಳಿದ್ದಾರೆ.

ಫಾಲ್ತಾ ಕ್ಷೇತ್ರದಲ್ಲಿ ಬಿಜೆಪಿ ದಾಖಲೆಯ ಅಂತರದ ಗೆಲುವು ಸಾಧಿಸಿರುವುದು ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗುತ್ತಿದೆ. ಈ ಫಲಿತಾಂಶವು ಮುಂದಿನ ದಿನಗಳಲ್ಲಿ ಪಶ್ಚಿಮ ಬಂಗಾಳದ ರಾಜಕೀಯ ಸಮೀಕರಣಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande