ನಾಳೆ ವಿಶ್ವ ಭೂ ಮತ್ತು ಜಲ ದಿನಾಚರಣೆ
ಬಳ್ಳಾರಿ, 25 ಮೇ (ಹಿ.ಸ.) : ಆ್ಯಂಕರ್ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ ಬಳ್ಳಾರಿ ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಇವರ ಸಹಯೋಗದಲ್ಲಿ ಮೇ 26 ರಂದು ಬೆಳಿಗ್ಗೆ 10.30 ಗಂಟೆಗೆ ವಿಶ್ವವಿದ್ಯಾಲಯದ ಆವರಣದಲ್ಲಿರುವ
ನಾಳೆ ವಿಶ್ವ ಭೂ ಮತ್ತು ಜಲ ದಿನಾಚರಣೆ


ಬಳ್ಳಾರಿ, 25 ಮೇ (ಹಿ.ಸ.) :

ಆ್ಯಂಕರ್ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ ಬಳ್ಳಾರಿ ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಇವರ ಸಹಯೋಗದಲ್ಲಿ ಮೇ 26 ರಂದು ಬೆಳಿಗ್ಗೆ 10.30 ಗಂಟೆಗೆ ವಿಶ್ವವಿದ್ಯಾಲಯದ ಆವರಣದಲ್ಲಿರುವ ಪ್ರೊ . ಸಿದ್ದು ಪಿ.ಅಲಗೂರ ಸೆಮಿನಾರ್ ಹಾಲ್ನಲ್ಲಿ “ಪರಿಸರ ಜಾಗೃತಿ ಹಾಗೂ ವಿಶ್ವ ಭೂ ಮತ್ತು ಜಲ ದಿನಾಚರಣೆ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ರಾಜೇಶ್ ಎನ್. ಹೊಸಮನೆ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ .ಎಂ.ಮುನಿರಾಜು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವಿಜಯನಗರ ವಿಭಾಗೀಯ ಕಚೇರಿಯ ಹಿರಿಯ ಪರಿಸರ ಅಧಿಕಾರಿ ಬಿ.ಎಸ್.ಮುರಳೀಧರ, ವಿಶ್ವವಿದ್ಯಾಲಯದ ಕುಲಸಚಿವ ಪ್ರೋ ಎ. ಲೋಕೇಶ, ಕುಲಸಚಿವ(ಮೌಲ್ಯಮಾಪನ) ಪ್ರೊ .ಎನ್.ಎಂ. ಸಾಲಿ ಹಾಗೂ ಹಣಕಾಸು ಅಧಿಕಾರಿ ಸ್ಫೂರ್ತಿ.ಕೆ.ಜಿ ಅವರು ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಬಳ್ಳಾರಿಯ ಪರಿಸರ ಅಧಿಕಾರಿ ಟಿ.ಎಂ. ಸಿದ್ದೇಶ್ವರ ಬಾಬು, ಉಪ ಪರಿಸರ ಅಧಿಕಾರಿ ಪವನ್.ಎಸ್ ಹಾಗೂ ವಿ.ಶ್ರೀ.ಕೃ.ವಿ.ವಿ.ಯ ಸಂಯೋಜಕ ಪ್ರೊ .ನಾಗಭೂಷಣ ಸಿ.ಎಂ ಸೇರಿದಂತೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿರುವರು ಎಂದು ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande