ಮೈಸೂರಿನಲ್ಲಿ ಸಂಚಾರಿ ಪೊಲೀಸ್ ‘ಜನಸಂಪರ್ಕ’ ಸಭೆ
ಮೈಸೂರು, 25 ಮೇ (ಹಿ.ಸ.) : ಆ್ಯಂಕರ್ : ಮೈಸೂರು ನಗರದ ನರಸಿಂಹರಾಜ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಂಚಾರ ಸಮಸ್ಯೆಗಳು ಹಾಗೂ ಕುಂದುಕೊರತೆಗಳಿಗೆ ಸ್ಪಂದಿಸುವ ಉದ್ದೇಶದಿಂದ ‘ಜನಸಂಪರ್ಕ’ ಸಭೆಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಡಿಸಿಪಿ ಸುಂದರ್ ರಾಜ್ ಕೆ.ಎಸ್. ಹಾಗೂ ಎಸಿಪಿ ಶಿ
Awareness


ಮೈಸೂರು, 25 ಮೇ (ಹಿ.ಸ.) :

ಆ್ಯಂಕರ್ : ಮೈಸೂರು ನಗರದ ನರಸಿಂಹರಾಜ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಂಚಾರ ಸಮಸ್ಯೆಗಳು ಹಾಗೂ ಕುಂದುಕೊರತೆಗಳಿಗೆ ಸ್ಪಂದಿಸುವ ಉದ್ದೇಶದಿಂದ ‘ಜನಸಂಪರ್ಕ’ ಸಭೆಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಡಿಸಿಪಿ ಸುಂದರ್ ರಾಜ್ ಕೆ.ಎಸ್. ಹಾಗೂ ಎಸಿಪಿ ಶಿವಶಂಕರ್ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರು ತಮ್ಮ ಪ್ರದೇಶಗಳ ಸಂಚಾರ ದಟ್ಟಣೆ, ರಸ್ತೆ ಸುರಕ್ಷತೆ, ವಾಹನ ನಿಲುಗಡೆ ಸಮಸ್ಯೆಗಳು ಸೇರಿದಂತೆ ವಿವಿಧ ಸಂಚಾರ ಸಂಬಂಧಿತ ಸಮಸ್ಯೆಗಳು ಮತ್ತು ಸಲಹೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು.

ಸಭೆಯಲ್ಲಿ ನಾಗರಿಕರು ಪ್ರಸ್ತಾಪಿಸಿದ ಪ್ರತಿಯೊಂದು ವಿಷಯವನ್ನೂ ಅಧಿಕಾರಿಗಳು ಗಮನದಿಂದ ಆಲಿಸಿ, ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಜೊತೆಗೆ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಲು ಸಾರ್ವಜನಿಕರ ಸಹಕಾರ ಅಗತ್ಯವೆಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ರಸ್ತೆ ಸುರಕ್ಷತೆ, ಸಂಚಾರಿ ನಿಯಮಗಳ ಪಾಲನೆ ಹಾಗೂ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಅಪಘಾತಗಳನ್ನು ತಡೆಯಬಹುದು ಎಂದು ಅಧಿಕಾರಿಗಳು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande