
ಬಳ್ಳಾರಿ, 25 ಮೇ (ಹಿ.ಸ.) :
ಆ್ಯಂಕರ್ : ಚಲಿಸುವ ರೈಲಿನಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಅಂದಾಜು 15 ರಿಂದ 17 ವರ್ಷದ ಅಪರಿಚಿತ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಮೃತ ಬಾಲಕಿಯ ಗುರುತು ಇನ್ನು ಪತ್ತೆಯಾಗದ ಹಿನ್ನೆಲೆಯಲ್ಲಿ ವಾರಸುದಾರರನ್ನು ಪತ್ತೆಹಚ್ಚಲು ರೈಲ್ವೆ ಪೆÇಲೀಸರು ಮನವಿ ಮಾಡಿದ್ದಾರೆ.
ಘಟನೆಯ ಹಿನ್ನೆಲೆ:
ಮೇ 17 ರಂದು ದರೋಜಿ ರೈಲು ನಿಲ್ದಾಣದ ಮುಂಭಾಗದ ತಿಮ್ಮಲಾಪುರ ರೈಲ್ವೆ ಗೇಟ್ ಹತ್ತಿರ ಚಲಿಸುತ್ತಿದ್ದ ರೈಲಿನಿಂದ ಈ ಬಾಲಕಿ ಆಯತಪ್ಪಿ ಕೆಳಗೆ ಬಿದ್ದಿದ್ದಳು. ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದ ಆಕೆಯನ್ನು ತಕ್ಷಣವೇ ಚಿಕಿತ್ಸೆಗಾಗಿ ಬಳ್ಳಾರಿಯ ಬಿಎಂಸಿಆರ್ಸಿ ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೇ 22 ರಂದು ಬಾಲಕಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಈ ಸಂಬಂಧ ಬಳ್ಳಾರಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತಳ ಚಹರೆ ಹಾಗೂ ಗುರುತು:
ಎತ್ತರ ಅಂದಾಜು 5.4 ಅಡಿ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಸುಮಾರು 2 ಇಂಚು ಉದ್ದದ ಕಪ್ಪು ಕೂದಲು ಇರುತ್ತದೆ. ಗುಲಾಬಿ ಬಣ್ಣದ ಟಾಪ್ ಮತ್ತು ಒಂದು ಗುಲಾಬಿ ಬಣ್ಣದ ಲೆಗಿನ್ಸ್ ಪ್ಯಾಂಟ್ ಧರಿಸಿದ್ದಾಳೆ.
ಬಾಲಕಿಯ ವಾರಸುದಾರರ ಬಗ್ಗೆ ವಿಳಾಸ ತಿಳಿದಿದ್ದಲ್ಲಿ ಬಳ್ಳಾರಿ ರೈಲ್ವೆ ಪೊಲೀಸ್ ಠಾಣೆಯ ಪಿ.ಎಸ್.ಐ ಮೊ.9480802131, ರಾಯಚೂರು ರೈಲ್ವೇ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕರ ಮೊ.9480800471, ಬೆಂಗಳೂರು ರೈಲ್ವೇಸ್ ನಿಯಂತ್ರಣ ಕೊಠಡಿ ಮೊ.9480802140 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ರೈಲ್ವೇ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್