ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತು ಕಾಂಗ್ರೆಸ್ ವಾಗ್ದಾಳಿ
ನವದೆಹಲಿ, 26 ಮೇ (ಹಿ.ಸ.) : ಆ್ಯಂಕರ್ : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾದರೂ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ನಿರಂತರ ಏರಿಕೆಯಾಗುತ್ತಿರುವ ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ
Kkharge


ನವದೆಹಲಿ, 26 ಮೇ (ಹಿ.ಸ.) :

ಆ್ಯಂಕರ್ : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾದರೂ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ನಿರಂತರ ಏರಿಕೆಯಾಗುತ್ತಿರುವ ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಚ್ಚಾ ತೈಲದ ಬೆಲೆ ಕಡಿಮೆಯಾಗಿದ್ದರೂ ಅದರ ಲಾಭವನ್ನು ಸಾಮಾನ್ಯ ಜನತೆಗೆ ನೀಡಲಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಮಂಗಳವಾರ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸರ್ಕಾರಿ ಅಂಕಿಅಂಶಗಳನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿರುವ ಖರ್ಗೆ, 2014ರ ಮೇ 26ರಂದು ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಭಾರತೀಯ ಬಾಸ್ಕೆಟ್ನ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ಗೆ 108.05 ಡಾಲರ್ ಇತ್ತು. ಆ ಸಂದರ್ಭದಲ್ಲಿ ಡಾಲರ್ ವಿರುದ್ಧ ರೂಪಾಯಿ ವಿನಿಮಯ ಮೌಲ್ಯ 58.59 ರೂಪಾಯಿ ಆಗಿತ್ತು ಎಂದು ತಿಳಿಸಿದ್ದಾರೆ.

ಅದೇ ಸಮಯದಲ್ಲಿ ದೇಶದಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ಗೆ 71.51 ರೂಪಾಯಿ ಹಾಗೂ ಡೀಸೆಲ್ ದರ 56.71 ರೂಪಾಯಿ ಇತ್ತು ಎಂದು ಖರ್ಗೆ ಹೇಳಿದ್ದಾರೆ. ಆದರೆ ಈಗ ಕಚ್ಚಾ ತೈಲದ ಬೆಲೆ 99 ಡಾಲರ್ಗಿಂತ ಕೆಳಮಟ್ಟದಲ್ಲಿದ್ದರೂ ಪೆಟ್ರೋಲ್ ದರ 102.12 ರೂಪಾಯಿ ಹಾಗೂ ಡೀಸೆಲ್ ದರ 95.20 ರೂಪಾಯಿಗೆ ಏರಿಕೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಅವಧಿಯಲ್ಲಿ ಪೆಟ್ರೋಲ್ ದರದಲ್ಲಿ ಸುಮಾರು 42.8 ಶೇಕಡಾ ಹಾಗೂ ಡೀಸೆಲ್ ದರದಲ್ಲಿ ಸುಮಾರು 67.9 ಶೇಕಡಾ ಏರಿಕೆಯಾಗಿದೆ ಎಂದು ಖರ್ಗೆ ಹೇಳಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ಸಾರಿಗೆ ವೆಚ್ಚ ಹೆಚ್ಚಾಗಿ, ಆಹಾರ ಪದಾರ್ಥಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳ ಮೇಲೂ ಪರಿಣಾಮ ಬೀರುತ್ತದೆ. ಇದರಿಂದ ಸಾಮಾನ್ಯ ಜನರ ಮೇಲಿನ ದರಭಾರ ಮತ್ತಷ್ಟು ಹೆಚ್ಚುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande